Sports News

ಸತತ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ವಿಫಲ; ಯುವಕ ಆತ್ಮಹತ್ಯೆ!

ಸತತ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ವಿಫಲ; ಯುವಕ ಆತ್ಮಹತ್ಯೆ!

ಬೆಳಗಾವಿ: ಪ್ರಸ್ತುತ ದಿನಮಾನಗಳಲ್ಲಿ ಯುವಕ/ಯುವತಿಯರು ಮಾನಸಿಕವಾಗಿ ತುಂಬಾ ದುರ್ಬಲಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಕಾರಣ ಏನೆಂದರೆ ಚಿಕ್ಕ ಚಿಕ್ಕ ವಿಷಯಗಳಿಗೆ ಯುವಕ ಯುವತಿಯರು ಮನಸ್ಸಿನಲ್ಲಿ ನೊಂದುಕೊಂಡು ಆತ್ಮಹತ್ಯೆಗೆ ಶರಣಾಗುತ್ತಾರೆ. ಇಂತಹದ್ದೆ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಸತತವಾಗಿ ಪ್ರಯತ್ನ ಪಡುತ್ತಿರುವಂತಹ ವಿದ್ಯಾರ್ಥಿ ಈ ಪರೀಕ್ಷೆಯಲ್ಲಿ ವಿಫಲವಾದ ಕಾರಣ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹೌದು, 24ರ ಯುವಕ ಬಲಿಯಾಗಿದ್ದಾನೆ, ಪದೇ ಪದೆ ಪ್ರಯತ್ನಿಸಿದರೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ.
ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ ಕನಸನ್ನು ಹೊಂದಿದ್ದನು ಮತ್ತು ಅದಕ್ಕಾಗಿ ತಯಾರಿ ನಡೆಸುತ್ತಿದ್ದನು. ಆತ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಎರಡು ವರ್ಷ ಕೆಲಸ ಮಾಡಿದ್ದನು. ಆದಾಗ್ಯೂ, ಆತ ಸೇನೆಗೆ ಸೇರಲು ಹಲವು ಬಾರಿ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು. ಈ ವೈಫಲ್ಯವನ್ನು ಸಹಿಸಲಾಗದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಈ ವೈಫಲ್ಯವನ್ನು ಸಹಿಸಲಾಗದ ಯುವಕ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಪ್ಪಾಣಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ವರದಿಗಾರ: ಪ್ರವೀಣ ಬೆಳಗಾವಿ

Disclaimer: This Story is auto-aggregated by a Syndicated Feed and has not been Created or Edited By City Big News Staff.