
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ನಟ ದರ್ಶನ್ ತೂಗುದೀಪ ಅವರು ಕಳೆದ ಎರಡು ವರ್ಷಗಳಿಂದ ಮಾಧ್ಯಮ ಮಿತ್ರರೊಂದಿಗೆ ಸಣ್ಣ ವಿಷಯಕ್ಕೆ ಸಂಬಂಧಿಸಿದಂತೆ ಮುನಿಸು ಬಂದಿತ್ತು, ಆದ ಕಾರಣ ನಟ ದರ್ಶನ್ ತೂಗುದೀಪ ಅವರು ಇಂದು ವರ್ಮಾಲಕ್ಷ್ಮಿ ಹಬ್ಬದ ದಿನದಂದೇ ಮಾಧ್ಯಮ ಮಿತ್ರರಲ್ಲಿ ಕ್ಷಮೆ ಕೋರಿದ್ದಾರೆ.
ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು
ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.