Please assign a menu to the primary menu location under menu

Local News

ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ.

ಒಂದೂವರೆ ವರ್ಷದ ವಿಜಯ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಅಥಣಿ ತಾಲೂಕಿನ ತಾಂವಶಿ  ಸನದಿ ತೋಟದಲ್ಲಿರುವ ನಿಂಗಪ್ಪನವರ ಮಗು ವಿಜಯ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದೆ.

ತಂದೆ ಹೊಲದ ಕೆಲಸಕ್ಕೆ ಹೋಗಿದ್ದು, ಮಗುವನ್ನು ಆಟವಾಡಲು ಬಿಟ್ಟು ತಾಯಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡಿಕೊಂಡಿದ್ದ ಮಗು ಬಕೆಟ್ ನಲ್ಲಿ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಕೆಲಸ ಮುಗಿದ ಬಳಿಕ ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದ್ದಾರೆ. ಬಕೆಟ್ ನಲ್ಲಿ ಮಗು ಬಿದ್ದು ಮೃತಪಟ್ಟಿರುವುದು ಕಂಡುಬಂದಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.


Leave a Reply

error: Content is protected !!