Politics News

ರಾಜ್ಯದಲ್ಲಿಕಮಲಕ್ಕೆ ಮತ್ತೊಂದು ಶಾಕ್

ರಾಜ್ಯದಲ್ಲಿಕಮಲಕ್ಕೆ ಮತ್ತೊಂದು ಶಾಕ್

ಬೆಂಗಳೂರು: 2023ನೇ ವಿಧಾನಸಭಾ ಚುನಾವಣೆಗೂ ಮುನ್ನ ಕರ್ನಾಟಕ ರಾಜ್ಯದಲ್ಲಿ ಸದ್ದು ಮಾಡಿದ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪವನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೆಂಪಣ್ಣ ಮಾಡಿದ್ದ ಕಮಿಷನ್ ಆರೋಪದ ತನಿಖೆಯನ್ನು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಎಚ್​ಎನ್​ ನಾಗಮೋಹನ್​ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ