Please assign a menu to the primary menu location under menu

State

BIG NEWS: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್; ವಕೀಲ ರಾಜೇಶ್ ಭಟ್ ಗೆ ಸಹಾಯ ಮಾಡಿದ್ದ ಸ್ನೇಹಿತ ಅರೆಸ್ಟ್

BIG NEWS: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್; ವಕೀಲ ರಾಜೇಶ್ ಭಟ್ ಗೆ ಸಹಾಯ ಮಾಡಿದ್ದ ಸ್ನೇಹಿತ ಅರೆಸ್ಟ್

ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಸ್ನೇಹಿತ ಅನಂತ್ ಭಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಬೊಂದೆಲ್ ನಿವಾಸಿ ಅನಂತ್ ಭಟ್, ವಕೀಲ ರಾಜೇಶ್ ಭಟ್ ಪರಾರಿಯಾಗಲು ಸಹಾಯ ಮಾಡಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಇದೀಗ ಅನಂತ್ ಭಟ್ ನನ್ನು ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ.

ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು, ನಾಪತ್ತೆಯಾಗಿರುವ ರಾಜೇಶ್ ಭಟ್ ಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.


Leave a Reply

error: Content is protected !!