ಮುಂಬೈ: ಮುಂಬೈ ಭೂಗತ ಜಗತ್ತಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನಲೆಯಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ರನ್ನು ಕೋರ್ಟ್ ಮಾರ್ಚ್ 3ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿದೆ.
ನಿನ್ನೆ ನವಾಬ್ ಮಲಿಕ್ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದರು.ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅವರನ್ನು ಬಂಧಿಸಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು.
ಈ ನಡುವೆ ಬಿಜೆಪಿ ಪಕ್ಷವು ಎನ್ಸಿಪಿ ನಾಯಕನ ರಾಜೀನಾಮೆಗೆ ಒತ್ತಾಯಿಸಿದ್ದು, ರಾಜೀನಾಮೆ ನೀಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.