Politics News

ಕಾಂಗ್ರೆಸ್ ಸೇರಿದ ಬಿಜೆಪಿಗರು

ಕಾಂಗ್ರೆಸ್ ಸೇರಿದ ಬಿಜೆಪಿಗರು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗಾಗಲೇ ಆಪರೇಷನ್ ಹಸ್ತ ಪ್ರಾರಂಭವಾಗಿದ್ದು ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿಸುತ್ತಿದ್ದಾರೆ ಎಂಬುದು ತಿಳಿದು ಬರುತ್ತಿದೆ ಇದರ ಬೆನ್ನಲ್ಲೇ ಬಿಜೆಪಿ ತ್ಯಜಿಸಿ ಜೆಡಿಎಸ್‌ ಸೇರಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ನಾಗರಾಜ್‌ಗೌಡ  ಇಂದು ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೆ. ಪಕ್ಷದ ಎಲ್ಲಾ ಮುಖಂಡರು ನನ್ನ ನಿಲುವಿಗೆ ಸಹಮತ ನೀಡಿ, ಸಹಕಾರ ನೀಡುವ ಭರವಸೆ ನೀಡಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದೆ. ಆದರೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್ ಅವಕಾಶ ನೀಡಿತ್ತು. ಜೆಡಿಎಸ್ ನಲ್ಲಿ ಯಾವುದೇ ಗೊಂದಲ ಇರಲಿಲ್ಲ. ಆದರೆ, ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಸೇರುತ್ತಿದ್ದೇನೆ. ಜೆಡಿಎಸ್ ತೊರೆಯುತ್ತಿರುವುದಕ್ಕೆ ಬೇಸರವಿಲ್ಲ. ರಾಜಕಾರಣವೇ ಒಂದು ಅವಕಾಶ. ಕಾಂಗ್ರೆಸ್ ನನ್ನ ಕೊನೆಯ ಬಸ್ ಸ್ಟಾಪ್ ಎಂದು ಕಾಣುತ್ತದೆ. ಬಿಜೆಪಿಯಿಂದ ನನಗೆ ಆಹ್ವಾನ ಬಂದಿಲ್ಲ ಎಂದು ತಿಳಿಸಿದರು.

ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ವಿಧಾನ ಪರಿಷತ್ ಪದವೀಧರ ಕ್ಷೇತ್ರ ಅಥವಾ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅವಕಾಶ ನೀಡಿದರೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುತ್ತೇನೆ. ನನ್ನೊಂದಿಗೆ ಜೆಡಿಎಸ್’ಗೆ ಬಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಕೂಡ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎಂದು ಹೇಳಿದರು.

 

 

Disclaimer: This Story is auto-aggregated by a Syndicated Feed and has not been Created or Edited By City Big News Staff.