Please assign a menu to the primary menu location under menu

State

BIG NEWS: ಸಿಂದಗಿ ಉಪಚುನಾವಣೆ; ಭರ್ಜರಿ ಗೆಲುವಿನತ್ತ ಬಿಜೆಪಿ

BIG NEWS: ಸಿಂದಗಿ ಉಪಚುನಾವಣೆ; ಭರ್ಜರಿ ಗೆಲುವಿನತ್ತ ಬಿಜೆಪಿ

ವಿಜಯಪುರ: ಎರಡೂ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಬಿರುಸುಗೊಂಡಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸುತ್ತಿದೆ. ಸಿಂದಗಿಯಲ್ಲಿ ಬಿಜೆಪಿ ಗೆಲುವಿನತ್ತ ದಾಪುಗಾಲಿಟಿದ್ದರೆ, ಹಾನಗಲ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಗೆಲುವಿಗಾಗಿ ತೀವ್ರ ಪೈಪೋಟಿ ನಡೆದಿದೆ.

ಸಿಂದಗಿಯಲ್ಲಿ 11ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 50,050 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 31,473 ಮತಗಳನ್ನು ಪಡೆದಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ನಾಜಿಯಾ 2067 ಮತಗಳನ್ನು ಪಡೆದು ಹಿನ್ನಡೆಯಲ್ಲಿದ್ದಾರೆ.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಈ ನಡುವೆ ಹಾನಗಲ್ ನಲ್ಲಿ 7ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.


Leave a Reply

error: Content is protected !!