Crime News

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ.

ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), ಮಕ್ಕಳಾದ ತನು (6), ಸಾಯಿರಾಜ್ (5) ಆತ್ಮಹತ್ಯೆಗೆ ಶರಣಾದವರು.

ಸ್ಥಳಕ್ಕೆ ಹುಮ್ನಾಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಾವಿಯಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Disclaimer: This Story is auto-aggregated by a Syndicated Feed and has not been Created or Edited By City Big News Staff.