Technology News

ನಂದಿನಿ ಉತ್ಪನ್ನಗಳ ರಾಯಭಾರಿ ಆದ ಸೆಂಚುರಿ ಸ್ಟಾರ್

ನಂದಿನಿ ಉತ್ಪನ್ನಗಳ ರಾಯಭಾರಿ ಆದ ಸೆಂಚುರಿ ಸ್ಟಾರ್

City Big News Desk.

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಕುಟುಂಬವನ್ನು ಹೊಂದಿರುವ ಡಾಕ್ಟರ್ ಶಿವರಾಜಕುಮಾರ್ ಅವರು ನಂದಿನಿ ಹಾಲಿನ ಉತ್ಪನ್ನಗಳಿಗೆ ರಾಯಭಾರಿಯಾಗಿದ್ದಾರೆ

ಹೌದು, ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

 

City Big News.

Disclaimer: This Story is auto-aggregated by a Syndicated Feed and has not been Created or Edited By City Big News Staff.