
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಣೆಯನ್ನು ಭಗವಾನ್ ಹನುಮಾನ್ ಟೆಂಪಲ್ ಪ್ಯಾಲೆಸ್ ರಸ್ತೆ, ಇಲ್ಲಿ ಆಮ್ಮಿಕೊಳ್ಳಲಾಗಿತ್ತು.
ಕಾಂಗ್ರೆಸ್ ಸರ್ಕಾರ ನೂರು ದಿನಗಳನ್ನು ಪೂರೈಸಿ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವುದರ ಮೂಲಕ ರಾಜ್ಯದ ಜನತೆಗೆ ನೀಡಿದ ಭರವಸೆಯನ್ನ ಪ್ರಾಮಾಣಿಕವಾಗಿ ಈಡೇರಿಸುತ್ತಿದೆ.
ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳು ಇಂದು ದೇಶದ ಎಲ್ಲೆಡೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಯೋಜನೆಯಾಗಿ ರೂಪಗೊಂಡಿದೆ. ಕಾಂಗ್ರೆಸ್ ಪಕ್ಷದ ನೇತಾರರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಫ್ ಸಿಂಗ್ ಸುರ್ಜಿವಾಲ ರವರು, ಚುನಾವಣೆ ಸಂದರ್ಭದಲ್ಲಿ ಬಂದು ರಾಜ್ಯದ ಜನತೆಗೆ ಆಶ್ವಾಸನೆ ನೀಡಿದರು. ಈ ಎಲ್ಲಾ ಐದು ಆಶ್ವಾಸನೆಗಳಲ್ಲಿ ನಾಲ್ಕು ಆಶ್ವಾಸನೆಗಳನ್ನು ಈಡೇರಿಸಿ ಜನರ ವಿಶ್ವಾಸವನ್ನು ಗಳಿಸಿದ ಸರ್ಕಾರವಾಗಿ ಕಾಂಗ್ರೆಸ್ ಸರ್ಕಾರ ಇಂದು ರೂಪಗೊಂಡಿದೆ, ಜನರ ಸಂಕಷ್ಟಕ್ಕೆ ಸ್ಪಂದಿಸಿ ಭ್ರಷ್ಟ ಮುಕ್ತ ಆಡಳಿತ ನೀಡುತ್ತಿರುವ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ರವರು ಹಾಗೂ ರಾಜ್ಯದ ಎಲ್ಲಾ ಸಚಿವರು ಪ್ರಾಮಾಣಿಕತೆಯಿಂದ ಜನ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯತು.
ಈ ಸಂದರ್ಭದಲ್ಲಿ ಎಸ್.ಮನೋಹರ್ ಪ್ರಧಾನ ಕಾರ್ಯದರ್ಶಿ ಕೆಪಿಸಿಸಿ ಹಾಗೂ ಪಕ್ಷದ ಮುಖಂಡರುಗಳಾದ ಎ. ಆನಂದ್, ಇ.ಶೇಖರ್, ಜಿ. ಜನಾರ್ಧನ್,ಎಲ್. ಜಯಸಿಂಹ,ಹೇಮರಾಜು, ಪರಿಸರ ರಾಮಕೃಷ್ಣ, ಪುಟ್ಟರಾಜು,ಉಮೇಶ್, ಸುಪ್ರಜ್, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.