
ಬೆಳಗಾವಿ: ಬಿಜೆಪಿಯವರು ಭ್ರಷ್ಟಾಚಾರ, ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅಥಣಿ ಹೆಲಿಪ್ಯಾಡ್ ಬಳಿ ಮಾಧ್ಯಮದವರೊಂದಿಗೆ ಮಾತನಾಡ, ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಸಂತೋಷವಾಗಿದ್ದಾರೆ. ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಬೆಳಗಾವಿಯಲ್ಲಿ ಚಾಲನೆ ದೊರೆಯಲಿದ್ದು, 1.28 ಕೋಟಿ ಕುಟುಂಬಗಳಿಗೆ ಮಾಹೆಯಾನ 2000 ರೂ. ನೆರವು ನೀಡುವ ದೇಶದಲ್ಲಿಯೇ ದೊಡ್ಡ ಯೋಜನೆಯಾಗಿದೆ. ನೇಕಾರರಿಗೆ ಉಚಿತ