ಬೆಳಗಾವಿ : ಇಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಚಿಕ್ಕೋಡಿಯಲ್ಲೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಈ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಸೈಯದ್ ಅಹ್ಮದ್ ಚಿಕ್ಕೋಡಿಯಲ್ಲಿ ಸ್ಥಳೀಯ ನಾಯಕರ ಜೊತೆಗೂಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ರಾಜ್ಯ ಸರಕಾರದ ಭ್ರಷ್ಟಾಚಾರದ ಕುರಿತು ಜನರಿಗೆ ಅರಿವು ಮೂಡಿಸಲು ಹಾಗೂ ಜನವಿರೋಧಿ ಸರಕಾರದ ಮಾಹಿತಿಯನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಲು ನಾವು ಈ ಹೋರಾಟವನ್ನು ಹಮ್ಮಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಕಮಿಟಿಯ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವರದಿ :ರತ್ನಾಕರ ಗೌಂಡಿ, ಬೆಳಗಾವಿ