Politics News

ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರ 8ನೇ ಅದ್ಬುತ: ವಿಜಯೇಂದ್ರ

ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರ 8ನೇ ಅದ್ಬುತ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದಲ್ಲಿ ಈಗಾಗಲೇ ಭ್ರಷ್ಟಾಚಾರದ ಕೂಗು ಜೋರಾಗಿ ಏಲುತ್ತಿದ್ದು ಇದರ ಬಗ್ಗೆ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಾಡಿರುವ ಭ್ರಷ್ಟಾಚಾರ ವಿರುದ್ದ ಮಾತನಾಡುವುದು ಪ್ರಪಂಚದ 8ನೇ ಅದ್ಬುತ ಎಂದು ಲೇವಡಿ ಮಾಡಿದ್ದಾರೆ. ನಮ್ಮ ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳು ಕೇಳಿ ಬಂದಿದೆ. ಬಿ.ಜೆ.ಪಿ ಸರ್ಕಾರವಿದ್ದಾಗ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದರು ಆದರೆ ಯಾರೂ ಕೂಡ ದಾಖಲೆಗಳನ್ನು ಕೊದಲು ಸಾದ್ಯವಾಗಿಲ್ಲ.

ಈಗ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ವಿರುದ್ದ15 ಪರ್ಸೆಂಟ್ ಆರೋಪ ಮಾಡಿದ್ದಾರೆ. ಈಗ ಕಾಂಗ್ರೆಸ್ ಏಕೆ ಸುಮ್ಮನಿರುವುದು ಎಂದು ಪ್ರಶ್ನಿಸಿದರು.

ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸ ಮಾಡಿದ್ದಾರೆ. ಈಗ ಸ್ವತಹ ಅವರ ಪಕ್ಷದ ಮೇಲೆಯೇ ಭ್ರಷ್ಟಚಾರದ ಆರೋಪ ಕೇಳಿ ಬಂದರೂ ಯಾವುದೇ ರೀತಿ ಕ್ರಮವಿಲ್ಲ. ಕಾಂಗ್ರೆಸ್ ಜನರಿಗೆ ಸುಳ್ಳು ಹೇಳಿಕೊಂಡು ಜನರ ಮುಖಕ್ಕೆ ಮಸಿ ಬಳಿಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.                                                                                                                          ಅಜಯ್(ಸಂಪಿಗೆಹಳ್ಳ

ವರದಿಗಾರರು

Disclaimer: This Story is auto-aggregated by a Syndicated Feed and has not been Created or Edited By City Big News Staff.