
ಬೆಂಗಳೂರು: ಬಿಜೆಪಿ ಸರ್ಕಾರ ಕಳೆದ ಬಾರಿ ಎನ್ಇಪಿ ಶಿಕ್ಷಣ ಪದ್ಧತಿಯನ್ನು ಜಾರಿ ಮಾಡಿತ್ತು ಇದರಿಂದ ವಿದ್ಯಾರ್ಥಿಗಳಿಗೆ ಉಪಯೋಗವಾಗುತ್ತಿದೆ ಇಲ್ಲವೋ ಎಂದು ಸರಿಯಾಗಿ ಗೊತ್ತಿಲ್ಲ ಹಾಗಾಗಿ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಹೌದು, ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದು ವಿವಿಯ ಕುಲಪತಿಗಳಿಗೆ ಸೂಚನೆ ನೀಡಿದರು. ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ ಎಂದು ತಿಳಿಸಿದರು.
Disclaimer: This Story is auto-aggregated by a Syndicated Feed and has not been Created or Edited By City Big News Staff.