
ಬೆಂಗಳೂರು: ರಾಜ್ಯದ ರಾಜ್ಯಧಾನಿ ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲ್ವೆ ಭೋಗಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿರುವ ಘಟನೆ ನಡೆದಿದೆ.
ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಧಿಡೀರ್ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್ ಯಾವುದೆ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.
Disclaimer: This Story is auto-aggregated by a Syndicated Feed and has not been Created or Edited By City Big News Staff.