ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಗೃಹಬಳಕೆಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆಯಿಂದ ಆದೇಶ ಹೊರಡಿಸಿದೆ
ಏಪ್ರಿಲ್ 30 ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಅನ್ನು ಸಂಪೂರ್ಣವಾಗಿ ಪಾವತಿಸಿದವರಿಗೆ ಮಾತ್ರ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತದೆ. ಯೋಜನೆ ವ್ಯಾಪ್ತಿಯ ಎಲ್ಲಾ ಕುಟುಂಬಗಳಿಗೂ ವಿದ್ಯುತ್ ಸಂಪರ್ಕಕ್ಕೆ ಮೀಟರ್ ಅಳವಡಿಸುವುದು ಕಡ್ಡಾಯವಾಗಿದ್ದು, ವಿದ್ಯುತ್ ಬಳಕೆಯ ಪ್ರಮಾಣ ದಾಖಲಿಸುವುದು ಕೂಡ ಕಡ್ಡಾಯವಾಗಿರುತ್ತದೆ.
ಪ್ರತಿ ತಿಂಗಳು ಬಿಲ್ ಬಂದ ಸಂದರ್ಭದಲ್ಲಿ ಗ್ರಾಹಕರು ಪೂರ್ಣ ಮೊತ್ತ ಪಾವತಿಸಬೇಕು. ನೇರ ನಗದು ವರ್ಗಾವಣೆ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಫಲಾನುಭವಿಗಳಿಗೆ ಹಣ ಮರು ಪಾವತಿ ಮಾಡಲಾಗುವುದು.
ಎಸ್ಸಿ,ಎಸ್ಟಿ, ಬಿಪಿಎಲ್ ಕುಟುಂಬಗಳ ವಿದ್ಯುತ್ ಬಳಕೆ 75 ಯೂನಿಟ್ ಮೀರಿದಲ್ಲಿ ಅಂತಹ ಗ್ರಾಹಕರು ಪೂರ್ಣ ಬಿಲ್ ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿದೆ.