Please assign a menu to the primary menu location under menu

State

ರೈತರಿಗೆ ಗುಡ್ ನ್ಯೂಸ್: ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರೈತರಿಗೆ ಗುಡ್ ನ್ಯೂಸ್: ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು: ತೋಟಗಾರಿಕೆ ಇಲಾಖೆಯಿಂದ 2021-22ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಅರ್ಹ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿಲಾಗಿದೆ. ತೋಟಗಾರಿಕೆ ಹಣ್ಣು, ತರಕಾರಿ ಮತ್ತು Read more…

ರಾಯಚೂರು: ತೋಟಗಾರಿಕೆ ಇಲಾಖೆಯಿಂದ 2021-22ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಅರ್ಹ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿಲಾಗಿದೆ.

ತೋಟಗಾರಿಕೆ ಹಣ್ಣು, ತರಕಾರಿ ಮತ್ತು ಹೂ ಬೆಳೆಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆ, ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಸಣ್ಣ, ಅತಿ ಸಣ್ಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ  ಕನಿಷ್ಟ 0.20 ಹೆಕ್ಟೇರ್ ನಿಂದ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ. 90 ರಷ್ಟು ಸಹಾಯದನ ನೀಡಲಾಗುವುದು. ಹಾಗೂ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ 5 ಹೆಕ್ಟೇರ್ ವರೆಗೆ ಶೇ. 45 ಸಹಾಯಧನ ನೀಡಲಾಗುವುದು.

ಆಸಕ್ತ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಅರ್ಹ ರೈತರು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿಯಲ್ಲಿ  ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಯಚೂರು:08531225253 ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವAತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.


Leave a Reply

error: Content is protected !!