
ಬೆಂಗಳೂರು: ಕಾಂಗ್ರೇಸ್ ನೇತೃತ್ವದ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮುಖ್ಯವಾಗಿ ಐದು ಗ್ಯಾರಂಟಿ ಯೋಜನೆ ಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2000 ರೂ.ನ್ನು ಜಾರಿಮಾಡಲು ಆ.16ರಂದು ಘೋಷಿಸಿದ್ದರು. ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಆಹ್ವಾನಿಸುವ ದೃಷ್ಟಿಯಿಂದಾಗಿ ಮತ್ತೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದಿನಾಂಕವನ್ನು ಆ.30ಕ್ಕೆ ನಿಗದಿ ಮಾಡಿ ಮುಂದೂಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಾಲ್ಕನೇ ಗ್ಯಾರಂಟಿಯಾಗಿ ಪ್ರತಿಷ್ಠಿತ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ, ಈ ಯೋಜನೆಯನ್ನು ಆಗಸ್ಟ್ ತಿಂಗಳ ಆರಂಭದಲ್ಲಿ ಜಾರಿಗೆ ತರವುದಾಗಿ ಘೋಷಿಸಿತ್ತು. ಇನ್ನು ಆ.15ರ ವೇಳೆಗೆ ಫಲಾನುಭವಿ ಮಹಿಳೆಯರಿಗೆ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವುದಾಗಿಯೂ ಸರ್ಕಾರ ಘೋಷಣೆ ಮಾಡಿತ್ತು. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದ್ದು, ರಾಜ್ಯದಲ್ಲಿ ಈವರೆಗೆ 1.5 ಕೋಟಿ ಮಹಳೆಯರಿಂದ ಅರ್ಜಿಗಳೂ ಸಲ್ಲಿಕೆಯಾಗಿವೆ.
ಯೋಜನೆ ಜಾರಿ ಸ್ಥಳ ಮೈಸೂರಿಗೆ ಶಿಫ್ಟ್: ಈಗಾಗಲೇ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿ ಯಲ್ಲಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಯೋಜನೆಯ ಉದ್ಘಾಟನಾ ದಿನಾಂಕವನ್ನು ಆ.30ಕ್ಕೆ ಮುಂದೂಡಿಕೆ ಮಾಡಿರುವುದರ ಜೊತೆಗೆ, ಉದ್ಘಾಟನಾ ಸ್ಥಳವನ್ನು ಬೆಳಗಾವಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಸ್ಥಳಾಂತರ ಮಾಡಿ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ.
ಉದ್ಘಾಟನೆಗೆ ರಾಹುಲ್ ಗಾಂಧಿ ಭಾಗಿ: ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಇನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಆಗಮಿಸಲಿದ್ದಾರೆ. ಇನ್ನು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ವರ್ಚುವಲ್ ಆಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಅರ್ಜಿಸಲ್ಲಿಸಿದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಜಮಮಾಡಲಾಗುವು.
ವರದಿಗಾರರು
ಮಂಜುನಾಥ. ಲಕ್ಕಿಮರ (ವಿಜಯನಗರ)
Disclaimer: This Story is auto-aggregated by a Syndicated Feed and has not been Created or Edited By City Big News Staff.