
ಬೆಂಗಳೂರ: ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಆದ್ದರಿಂದ ರಾಜ್ಯದ ಜಿಲ್ಲೆಗಳಾದಂತಹ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ.
ಮುಂಗಾರು ದುರ್ಬಲವಾಗಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್ 17ರಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
(ವರದಿಗಾರ:ಕೋಲಾರ ರೆಡ್ಡಿ)
Disclaimer: This Story is auto-aggregated by a Syndicated Feed and has not been Created or Edited By City Big News Staff.