ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಪರಿಣಾಮ ಬಿಹಾರ, ಜಾರ್ಖಂಡ್, ಕರ್ನಾಟಕ, ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಹಲವೆಡೆಯೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮುಂದಿನ 4 ದಿನ ಕೂಡ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ