international News

ಕರ್ನಾಟಕದಲ್ಲಿ ಮಳೆ ಕೊರತೆ: ಇಂದು ಮಹತ್ವದ ಸಭೆ

ಕರ್ನಾಟಕದಲ್ಲಿ ಮಳೆ ಕೊರತೆ: ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆ ಬರದ ಕಾರಣ ರೈತರಿಗೆ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದೆ. ಹಾಗಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗುವ ಹಿನ್ನೆಲೆ ಇಂದು ಮಹತ್ವದ ಸಭೆಯನ್ನು ಕೈಗೊಳ್ಳಲಾಗಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆ ಮೋಡ ಬಿತ್ತನೆ, ಪರಿಹಾರ ವಿತರಣೆ ಬಗ್ಗೆ ಇಂದು ಮಹತ್ವದ ಸಭೆ ನಡೆಯಲಿದೆ.

ಸಚಿವ ಕೃಷ್ಣಭೈರೇಗೌಡ ಅಧ್ಯಕ್ಷತೆಯ ಉಪಸಮಿತಿಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎನ್. ಚೆಲುವರಾಯ ಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ, ಕೆ.ಎನ್. ರಾಜಣ್ಣ ಸದಸ್ಯರಾಗಿದ್ದಾರೆ.

ರಾಜ್ಯದಲ್ಲಿ ಬಿತ್ತನೆ ಗುರಿ ಕಡಿಮೆಯಾಗಿದ್ದು, ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಡುವೆ ಬರ ಘೋಷಣೆ ನಿಯಮ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಇನ್ನು ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು.

ಬೆಳೆ ನಷ್ಟ, ಮಳೆ ಕೊರತೆ ಬಗ್ಗೆ ಸಂಬಂಧಿತ ಇಲಾಖೆಗಳಿಂದ ಈಗಾಗಲೇ ಮಾಹಿತಿ ಪಡೆದುಕೊಂಡಿದ್ದು, ಬರ ಘೋಷಣೆ ಮಾಡುವುದು, ಪರಿಹಾರ ನೀಡಲು ಎಷ್ಟು ಹಣ ಬೇಕಾಗಬಹುದು, ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದು, ಮೋಡ ಬಿತ್ತನೆ ಮೊದಲಾದ ವಿಷಯಗಳ ಕುರಿತು ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Disclaimer: This Story is auto-aggregated by a Syndicated Feed and has not been Created or Edited By City Big News Staff.