Please assign a menu to the primary menu location under menu

Crime News

ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಘೋರ ಕೃತ್ಯ, ಹತ್ಯೆ ಬಳಿಕ ಚಿನ್ನಾಭರಣದೊಂದಿಗೆ ಠಾಣೆಗೆ ಶರಣಾದ ಆರೋಪಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಘೋರ ಕೃತ್ಯ, ಹತ್ಯೆ ಬಳಿಕ  ಚಿನ್ನಾಭರಣದೊಂದಿಗೆ ಠಾಣೆಗೆ ಶರಣಾದ ಆರೋಪಿ

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಪತ್ನಿಯನ್ನು ಪತಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ನಗರದ ವಾಸು ಸತ್ಯ ಬಡಾವಣೆಯಲ್ಲಿ ನಡೆದಿದೆ. 19 ವರ್ಷದ ಪತ್ನಿಯನ್ನು ಹತ್ಯೆ ಮಾಡಿದ ಶೋಯಬ್ ತುಂಗಾ Read more…

ಶಿವಮೊಗ್ಗ: ಮಾರಕಾಸ್ತ್ರದಿಂದ ಕೊಚ್ಚಿ ಪತ್ನಿಯನ್ನು ಪತಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ನಗರದ ವಾಸು ಸತ್ಯ ಬಡಾವಣೆಯಲ್ಲಿ ನಡೆದಿದೆ.

19 ವರ್ಷದ ಪತ್ನಿಯನ್ನು ಹತ್ಯೆ ಮಾಡಿದ ಶೋಯಬ್ ತುಂಗಾ ನಗರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಆಲ್ಕೊಳದ ಖಾಸಗಿ ಕಾಲೇಜಿಗೆ ಹೋಗುತ್ತಿದ್ದ ಆಯನೂರಿನ ಯುವತಿ ಟಿಪ್ಪುನಗರದ ಗುಜರಿ ಕೆಲಸಗಾರ ಶೋಯಬ್ ನನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಒಂದು ವರ್ಷದ ಮಗುವಿದೆ.

ಕೆಲ  ದಿನಗಳ ಇಂದೆ ಗಂಡನೊಂದಿಗೆ ಜಗಳವಾಡಿದ್ದ ಪತ್ನಿ ತವರುಮನೆ ಸೇರಿಕೊಂಡಿದ್ದು, ಕಂಪ್ಯೂಟರ್ ಕ್ಲಾಸ್ ಕಲಿಯಲು ಶಿವಮೊಗ್ಗಕ್ಕೆ ಬರುತ್ತಿದ್ದಳು. ಆಕೆಯನ್ನು ವಾಸು ಸತ್ಯ ಬಡಾವಣೆಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದ ಶೋಯಬ್ ಪತ್ನಿಯನ್ನು ಮಾರಕಾಸ್ತ್ರದಿಂದ ಥಳಿಸಿ, ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ. ಆಕೆಯ ಮೈಮೇಲ್ಲಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ತುಂಗಾನಗರ ಠಾಣೆಗೆ ಬಂದು ಶರಣಾಗಿದ್ದಾನೆ. ಅಕ್ರಮ ಸಂಬಂಧದಿಂದ ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Leave a Reply

error: Content is protected !!