ಬೆಳಗಾವಿ: ಚುನಾವಣೆ ವಿಚಾರಕ್ಕೆ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮೇ 4ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜು ಚುನಾವಣೆ ವಿಚಾರಕ್ಕೆ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಬುರಾರಾಮ್ ಗೋಧರೆ ಮೇಲೆ ರಕ್ತ ಬರುವಾಗ ಹಾಗೆ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದಾಗಿ ಬುರಾರಾಮ್ ಮೂಗು ಹಾಗೂ ಕಿರಿ ಬೆರಳಿಗೆ ಗಾಯಗಳಾಗಿವೆ. ಮೂಗಿನ ಶಸ್ತ್ರಚಿಕಿತ್ಸೆಗೆ ರಾಜಸ್ಥಾನ ಆಸ್ಪತ್ರೆಗೆ ವಿದ್ಯಾರ್ಥಿ ಬುರಾರಾಮ್ ಅವರನ್ನು ದಾಖಲಿಸಲಾಗಿದೆ.
ಇನ್ನು ಈ ಘಟನೆ ಸಂಬಂಧ ಬಿಮ್ಸ್ ಆಡಳಿತಾಧಿಕಾರಿ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಸದ್ಯ ಕಾಲೇಜಿನಿಂದ ವಿದ್ಯಾರ್ಥಿಗಳು ಅಮಾನತು ಮಾಡಲಾಗಿದೆ.