
ಬೆಂಗಳೂರು: ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಪೂರ್ವ ಸಿದ್ದತಾ ಸಭೆಯನ್ನು ನಡೆಸಿ ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆಯನ್ನು ನೀಡಿದರು
ಈ ಸಭೆಯಲ್ಲಿ ಪ್ರಮುಖವಾಗಿ ಕ್ರೀಡಾ ದಿನಾಚರಣೆ ಮುಖ್ಯ ಅತಿಥಿಯಾಗಿ ಕರ್ನಾಟಕ ಸರ್ಕಾರದ ಘನತೆವೆತ್ತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರನ್ನು ಆಹ್ವಾನಿಸಿ ಎಂದು ಸೂಚನೆ ನೀಡಿದರು
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ರೀತಿಯ 24 ಕ್ರೀಡೆಗಳ ಕ್ರೀಡಾಕೂಟವನ್ನು ಆಯೋಜಿಸಿ ರಾಜ್ಯದ 31 ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳು ಪಾಲ್ಗೊಳ್ಳುವ ವ್ಯವಸ್ಥೆ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂಧರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರಾದ ಶಶಿಕುಮಾರ್, ಉಪ ನಿರ್ದೇಶಕರಾದ ಜಿತೇಂದ್ರ ಶೆಟ್ಟಿರವರು ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು
Disclaimer: This Story is auto-aggregated by a Syndicated Feed and has not been Created or Edited By City Big News Staff.