Entertainment News

ರಾಜ್ಯ ಸರ್ಕಾರ ರೈತರ ಹಿತಕಾಯಲು ಬದ್ಧ: ಸಚಿವ ಚಲುವರಾಯಸ್ವಾಮಿ

ರಾಜ್ಯ ಸರ್ಕಾರ ರೈತರ ಹಿತಕಾಯಲು ಬದ್ಧ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರವು ರೈತರ ಹಿತ ಕಾಪಾಡಲು ಮತ್ತು ರೈತರ ಸಂಕಷ್ಟಕ್ಕೆ ಸ್ಪಂದಿಸಲು ನಾವು ಯಾವಾಗಲೂ ಸಿದ್ಧವಿದ್ದೇವೆ ಎಂದು ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.

ಅವರು ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ಕಾವೇರಿ ನದಿ ನೀರಿನ ಹಂಚಿಕೆ ಸಂಕಷ್ಟ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದರು‌

ಭಾರತ ಸರ್ಕಾರದ ಆಹಾರ ಸಂಸ್ಕರಣಾ ಮಂತ್ರಾಲಯ, ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ,ಕರ್ನಾಟಕ ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಮಂಡ್ಯದ ಡಾ.ರಾಜ್ ಕುಮಾರ್ ಬಡಾವಣೆ ಮೈದಾನದಲ್ಲಿ ಏರ್ಪಡಿಸಿದ್ದ ಸಿರಿಧಾನ್ಯ ಮೇಳ, ವಸ್ತು ಪ್ರದರ್ಶನ ಹಾಗೂ ಬೆಲ್ಲದ ಪರಿಷೆ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರಿನ‌ ಹಂಚಿಕೆಗೆ ಸಂಕಷ್ಟ ಸೂತ್ರ ಬೇಕು. ರಾಜ್ಯದ ರೈತರನ್ನು ಉಳಿಸುವುದು ನಮ್ಮ ಜವಾಬ್ದಾರಿ ಅದನ್ನು ನಿರ್ವಹಿಸುತ್ತೇವೆ ಎಂದರು. ಕಡಿಮೆ ನೀರಿನ ಬಳಕೆ ಮೂಲಕ ಕೃಷಿ ಮಾಡುವುದು, ಅಂತರ್ಜಲ ಹೆಚ್ಚಿಸುವ ಪ್ರಯತ್ನಗಳನ್ನೂ ನಾವು ಮಾಡಬೇಕಿದೆ. ಕೃಷಿ ಹೊಂಡ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

 

Disclaimer: This Story is auto-aggregated by a Syndicated Feed and has not been Created or Edited By City Big News Staff.