National News

ಹು-ಧಾ ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ: ಸಚಿವ ಪರಮೇಶ್ವರ್

ಹು-ಧಾ ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ: ಸಚಿವ ಪರಮೇಶ್ವರ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಡ್ರಗ್ಸ್ ದಂದೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಇದನ್ನು ನಾವು ಮುಟ್ಟುಗೊಲು ಹಾಕುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ ಅವರು ಹೇಳಿದರು.

ಅವರು ಇಂದು ಹುಬ್ಬಳ್ಳಿ ಧಾರವಾಡ ಪೊಲೀಸರೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು 3 ತಿಂಗಳ ಗಡುವು ನೀಡಲಾಗಿದೆ ಎಂದು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ನಿಷೇಧಿತ ವಸ್ತುಗಳ ಸರಬರಾಜನ್ನು ತಡೆಗಟ್ಟಲು ಹಾಗೂ ದಂಧೆಕೋರರ ಮೇಲೂ ನಿಗಾ ವಹಿಸಲು ಗೃಹ ಇಲಾಖೆ ಸನ್ನದ್ಧವಾಗಿದೆ. ಇನ್ನು 3 ತಿಂಗಳಲ್ಲಿ ಜಿಲ್ಲೆಯನ್ನು ‘ಮಾದಕ ವಸ್ತು ಮುಕ್ತ’ ಎಂದು ಘೋಷಿಸಲಾಗುವುದು ಎಂದರು.

ಇನ್ನು ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹು-ಧಾಗೆ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಆರು ತಿಂಗಳು ಅವಕಾಶ ನೀಡಿದ್ದೇನೆ. ಇದನ್ನು ತಡೆಗಟ್ಟದಿದ್ದರೆ‌ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು.

ಧಾರವಾಡ ಜಿಲ್ಲೆ ಮತ್ತು ಅವಳಿ ನಗರದ ಅಪರಾಧ ಪ್ರಮಾಣ ರಾಜ್ಯದ ಇತರ ಭಾಗಗಳಿಗಿಂತ ಭಿನ್ನವಾಗಿಲ್ಲ ಎಂದ ಸಚಿವರು, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಅಪರಾಧವನ್ನು ಕಡಿಮೆ ಮಾಡಲು ಪೊಲೀಸರಿಗೆ ಸೂಚನೆ ನೀಡಿದರು.

 

Disclaimer: This Story is auto-aggregated by a Syndicated Feed and has not been Created or Edited By City Big News Staff.