
ಬೆಂಗಳೂರು: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವ ಹಾಗೆ ಮಾಡಿರುವ ಇಸ್ರೋ ಸಂಸ್ಥೆಯ ಚಂದ್ರಯಾನ 3 ಯಶಸ್ವಿಗೊಂಡಿರುವುದರಿಂದ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇದೆ ಆಗಸ್ಟ್ 26ರಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಇಸ್ರೋ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ 3 ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿರುವ ಕಾರಣ ನಗರದ ಪ್ರಮುಖ ರಸ್ತೆಗಳನ್ನು ಬಂದು ಮಾಡಲಾಗುವುದು ಎಂದು ತಿಳಿದುಬಂದಿದೆ. ಆಗಸ್ಟ್ 26ರಂದು ಸಂಚಾರ ಮಾರ್ಗ ಬದಲಾವಣೆ ಮಾಡಿ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.
ಇದೇ ಆಗಸ್ಟ್ 26 ಬೆಳಗ್ಗೆ 4:30 ರಿಂದ ಬೆಳಗ್ಗೆ 9:30 ರವರೆಗೆ ಕೆಳಕಂಡ ರಸ್ತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಈ ರಸ್ತೆಗಳ ಬದಲಾಗಿ ಪರ್ಯಾಯ ಮಾರ್ಗ ಬಳಕೆಗೆ ಪೋಲಿಸರು ಮನವಿ ಮಾಡಿದ್ದಾರೆ.
ಓಲ್ಡ್ ಏರ್ಪೋರ್ಟ್ ರಸ್ತೆ, ಓಲ್ಡ್ ಮದ್ರಾಸ್ ರಸ್ತೆ, ಎಂ.ಜಿ.ರಸ್ತೆ,ಕಬ್ಬನ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಬಳಸದಿರುವಂತೆ ಪೊಲೀಸರು ತಿಳಿಸಿದ್ದಾರೆ.
ಸಿವಿ ರಾಮನ್ ರಸ್ತೆ, ಯಶವಂತಪುರ ಫ್ಲೈ ಓವರ್, ತುಮಕೂರು ರಸ್ತೆ , ಮಾಗಡಿ ರಸ್ತೆ, ಹೊರವರ್ತುಲ ರಸ್ತೆ ಗುಬ್ಬಿ ತೋಟದಪ್ಪ ರಸ್ತೆ, ಜಾಲಹಳ್ಳಿ ಕ್ರಾಸ್ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.