
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಕುಟರನಟ್ಟಿ ಗ್ರಾಮದ ಗುಡ್ಡದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ.
ಕೊಲೆಯಾದ ವ್ಯಕ್ತಿ ಬೈಲಹೊಂಗಲ ನಿವಾಸಿ ಸಂಗಮೇಶ ಮಾರುತೆಪ್ಪ ತಿಗಡಿ (38) ಎಂದು ತಿಳಿದುಬಂದಿದೆ.
ಕೊಲೆ ಆರೋಪದಲ್ಲಿ ಸವದತ್ತಿ ತಾಲೂಕಿನ ಹಿರೇಕೊಪ್ಪ ಕೆ.ಎಂ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ, ಅಡಿವೇಶ ಅಜ್ಜಪ್ಪ ಬೋಳತ್ತಿನ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನು ಸಂಗಮೇಶ ಕೊಲೆಯಾಗುವುದಕ್ಕಿಂತ ಮುಂಚೆ ಆತನಿಗೆ ಮದ್ಯ ಕುಡಿಸಲಾಗಿದೆ. ಕೊಲೆಗೆ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.
ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.