Please assign a menu to the primary menu location under menu

National

ನೌಶೇರಾ ಸೆಕ್ಟರ್‌ನಲ್ಲಿ ನಿಗೂಢ ಸ್ಫೋಟ : ಸೇನಾಧಿಕಾರಿ, ಯೋಧ ಹುತಾತ್ಮ

ನೌಶೇರಾ ಸೆಕ್ಟರ್‌ನಲ್ಲಿ ನಿಗೂಢ ಸ್ಫೋಟ : ಸೇನಾಧಿಕಾರಿ, ಯೋಧ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಭಾರತೀಯ ಸೇನಾ ಅಧಿಕಾರಿ ಮತ್ತು ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ರಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿತ್ಯದಂತೆ ಗಸ್ತು ತಿರುಗುವ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ನಿಖರ ಸ್ವರೂಪ ತಕ್ಷಣಕ್ಕೆ ತಿಳಿದುಬಂದಿಲ್ಲ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.


Leave a Reply

error: Content is protected !!