LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಓಮ್ನಿ-ಗೂಡ್ಸ್ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಮಹಿಳಾ ಕೂಲಿ ಕಾರ್ಮಿಕರು ದುರ್ಮರಣ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಘೋರ ರಸ್ತೆ ದುರಂತವೊಂದು ಸಂಭವಿಸಿದ್ದು, ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಗೆ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಸಮೀಪ, ಶಿಡ್ಲಘಟ್ಟ-ಚಿಂತಾಮಣಿ ಮುಖ್ಯರಸ್ತೆಯಲ್ಲಿ ಈ ರಕ್ತಸಿಕ್ತ ಅಪಘಾತ ನಡೆದಿದೆ.

ಹೂ ಕಟಾವಿಗೆ ತೆರಳುತ್ತಿದ್ದಾಗ ಎದುರಾಯ್ತು ಕಂಟಕ

ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಮತ್ತು ಮುನಿಚೆನ್ನಮ್ಮ (40) ಅಪಘಾತದಲ್ಲಿ ಜೀವ ಕಳೆದುಕೊಂಡ ದುರ್ದೈವಿಗಳು. ಇವರೆಲ್ಲರೂ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಓಮ್ನಿ ಕಾರಿನಲ್ಲಿ ಹುಜುಗೂರು ಗ್ರಾಮಕ್ಕೆ ಹೂ ಕಟಾವು ಕೆಲಸಕ್ಕಾಗಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಒಟ್ಟು 10 ಮಂದಿ ಕೂಲಿ ಕಾರ್ಮಿಕರಿದ್ದು, ಪ್ರಯಾಣದ ಮಾರ್ಗಮಧ್ಯದಲ್ಲೇ ಈ ದುರಂತ ಸಂಭವಿಸಿದೆ.

ಚಾಲಕನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಚಾಲಕ ಮನೋಜ್ ಸೇರಿದಂತೆ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದ್ದು, ಚಾಲಕ ಮನೋಜ್ ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಇನ್ನುಳಿದ ಕೆಲವು ಮಹಿಳೆಯರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ