LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯಿರಿ: ರೈತರಿಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

ಮಂಡ್ಯ :  ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಮಳೆಯಾಗದ ಪರಿಣಾಮ ತೀವ್ರ ಬರಗಾಲ ಆವರಿಸಿದೆ. ರೈತರು ಕೆಆರ್ಎಸ್ ಜಲಾಶಯದ ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯಬೇಕೆಂದು ಶಾಸಕ ಕೆ.ಎಂ.ಉದಯ್ ಮನವಿ ಮಾಡಿದರು.

ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಅಂದಾಜು 2 ಕೋಟಿ ರೂ ವೆಚ್ಚದಲ್ಲಿ ನಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಕೆಆರ್ಎಸ್ ಜಲಾಶಯದಲ್ಲಿ ಪ್ರಸ್ತುತ 107 ಅಡಿ ನೀರಿನ ಸಂಗ್ರಹವಿದ್ದು, ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದ್ದು, ಜನರಿಗೆ ಕುಡಿಯುವ ನೀರು ಹಾಗೂ ಕೆರೆ ಕಟ್ಟೆಗಳಿಗೆ ನೀರು ತುಂಬಿಸಬೇಕಾಗುತ್ತದೆ. ಹೀಗಾಗಿ, ರೈತರು ನೀರಿನ ಲಭ್ಯತೆ ನೋಡಿಕೊಂಡು ಬೆಳೆ ಬೆಳೆಯದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು.

ಈಗಾಗಲೇ ಮದ್ದೂರು ತಾಲೂಕಿನ ವಿ.ಸಿ.ನಾಲೆಯ ಕೊನೆ ಭಾಗಕ್ಕೂ ಸರಾಗವಾಗಿ ನೀರು ಹರಿಯುವಂತೆ ಹಂತ ಹಂತವಾಗಿ ನಾಲೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ ಕ್ಷೇತ್ರದ ನೀರಾವರಿ ಯೋಜನೆಗಳಿಗೆ 800 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ರೈತರ ಬಹು ದೊಡ್ಡ ಸಮಸ್ಯೆಯಾಗಿರುವ ನಾಲೆಗಳ ಅಭಿವೃದ್ಧಿಗೆ ಹಂತ ಹಂತವಾಗಿ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರಾದ ಶಿವಚರಣ್, ಮಹದೇವು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪಿ.ರಾಘವಾ, ಪ್ರವೀಣ್, ಪ್ರಶಾಂತ್ ಕಾವೇರಿ ನೀರಾವರಿ ನಿಗಮದ ಇಇ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ