LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೈಜ್ಞಾನಿಕ ವರದಿ ಆಧರಿಸಿ ಇನ್ನಷ್ಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : "ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, "ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ" ಎಂದು ತೀಕ್ಷ್ಣವಾಗಿ ಹೇಳಿದರು.

ಆಸ್ತಿ ಕಳೆದುಕೊಂಡ ರೈತರ ರಕ್ಷಣೆ ಸರ್ಕಾರದ ಜವಾಬ್ದಾರಿ:

"ರೈತರು ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ, ಅವರನ್ನು ರಕ್ಷಣೆ ಮಾಡಬೇಕು. ನನಗೂ ಪ್ರಜ್ಞೆ ಇದೆ. ಮನುಷ್ಯ ವಿದ್ಯಾವಂತನಾಗಿರದಿದ್ದರೂ ಬುದ್ಧಿವಂತನಾಗಿರಬೇಕು, ಸಾಮಾನ್ಯ ಪ್ರಜ್ಞೆ ಇರಬೇಕು” ಎಂದು ತಿರುಗೇಟು ನೀಡಿದರು.

ಇನ್ನಷ್ಟು ತಾಲ್ಲೂಕುಗಳಲ್ಲಿ ಬರ ಘೋಷಣೆ: ವೈಜ್ಞಾನಿಕ ವರದಿ ಆಧರಿಸಿ ಕ್ರಮ

ಬರ ವೀಕ್ಷಣೆಯ ಬಗ್ಗೆ ಕೇಳಿದಾಗ, "ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ಘೋಷಣೆ ವಿಚಾರದಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳನ್ನು ಆಧರಿಸಿ 2–3 ಹಂತಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಇನ್ನೂ ಹಲವು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು" ಎಂದು ಹೇಳಿದರು.

"ಹಲವು ತಾಲ್ಲೂಕಿನಿಂದ ಬರದ ವರದಿಗಳು ಬರುತ್ತಿವೆ. ಇನ್ನೂ ಬಹಳ ತಾಲೂಕುಗಳು ಘೋಷಣೆಯಾಗುತ್ತವೆ. ಬಹಳ ಕಡೆ ಭೀಕರ ಬರ ಇದೆ. 21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡಲಾಗುವುದು” ಎಂದರು.

ಶಾಸಕರು ಆತಂಕ ಪಡಬೇಡಿ: ಸಿಎಂ ಅಭಯ

“ಶಾಸಕರು ಯಾರೂ ಆತಂಕ ಪಡಬೇಡಿ. ಎಲ್ಲೆಲ್ಲಿ ಬರ ಇದೆ ಎಂಬುದನ್ನು ವೈಜ್ಞಾನಿಕವಾಗಿ ನಿರ್ಧರಿಸಬೇಕು. ಉಪಮುಖ್ಯಮಂತ್ರಿ ವರದಿಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ  ಮಾತನಾಡಿದ್ದೇವೆ. ಒಂದೇ ಸಲ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಹಂತಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ” ಎಂದು ಹೇಳಿದರು.

ರೈತರ ಸಮಸ್ಯೆಗೆ ವಿಶೇಷ ಅಧಿವೇಶನ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆದಿರುವುದಾಗಿ. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ" ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ