LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿಯ ನೂತನ ಪೊಲೀಸ್ ಕಮಿಷನರ್‌ಗೆ ಕ್ರಿಮಿನಲ್ ಆರೋಪಿಗಳಿಂದ ಸನ್ಮಾನ: ಪೋಟೋ ವೈರಲ್!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವ ನೂತನ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರಿಗೆ ಗಂಭೀರ ಕ್ರಿಮಿನಲ್ ಪ್ರಕರಣಗಳ ಆರೋಪಿಗಳು ಹೂಗುಚ್ಛ ನೀಡಿ ಗೌರವ ಸಲ್ಲಿಸಿರುವ ವಿದ್ಯಮಾನ ಸಾರ್ವಜನಿಕ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನಡೆದಿರುವ ಈ ಸತ್ಕಾರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.

ಆರೋಪಿಗಳ ಉಪಸ್ಥಿತಿಯಿಂದ ಮುಜುಗರ

ನಗರ ಪೊಲೀಸ್ ಆಯುಕ್ತರಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಹಲವು ಗಣ್ಯರು ಹಾಗೂ ಸಾರ್ವಜನಿಕರು ಕಚೇರಿಗೆ ತೆರಳಿ ಭೂಷಣ್ ಬೋರಸೆ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಈ ವೇಳೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಬದ್ದಿ ಹಾಗೂ ಮಾದಕ ವಸ್ತು ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ಎದುರಿಸುತ್ತಿರುವ ಖೇತ್‌ಸಿಂಗ್ ರಾಜಪುರೋಹಿತ್ ಎಂಬಿಬ್ಬರು ಕಮಿಷನರ್ ಕಚೇರಿಗೆ ನೇರವಾಗಿ ತೆರಳಿ ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ. ನೂತನ ಆಯುಕ್ತರೊಂದಿಗೆ ಇಬ್ಬರೂ ಆರೋಪಿಗಳು ಜೊತೆಗಿರುವ ಛಾಯಾಚಿತ್ರಗಳು ಬಹಿರಂಗವಾಗುತ್ತಿದ್ದಂತೆ ಪೊಲೀಸ್ ಇಲಾಖೆಗೆ ತೀವ್ರ ಮುಜುಗರ ಉಂಟಾಗಿದೆ.

ಆಯುಕ್ತರ ಸ್ಪಷ್ಟನೆ

ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ, "ನಾನು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನೂರಾರು ಜನರು ಬಂದು ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಸಾರ್ವಜನಿಕರ ದಟ್ಟಣೆಯ ನಡುವೆ ಬಂದವರ ಹಿನ್ನೆಲೆ ತಕ್ಷಣಕ್ಕೆ ಗಮನಕ್ಕೆ ಬಂದಿರಲಿಲ್ಲ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಚೇರಿ ಪ್ರವೇಶದ ವೇಳೆ ಕಟ್ಟುನಿಟ್ಟಿನ ನಿಗಾ ಇಡಲಾಗುವುದು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗುವುದು," ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ