LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್

ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕ್ರಿಮಿನಲ್ ಪ್ರಕರಣ ವೊಂದರಲ್ಲಿ ಆರೋಪಿ ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ವೀರಣ್ಣ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಗುರುಮಠಕಲ್ ತಾಲೂಕಿನ ಗೋಪಾಲಪುರ ಗ್ರಾಮದ ಆನಂದ್ ಎಂಬುವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅವರನ್ನು ಬಂಧಿಸದಿರಲು ಮತ್ತು ಇನ್ನೊಂದು ಪ್ರಕರಣದಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಕುರಿತಾಗಿ ಆನಂದ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಂದು ಲಕ್ಷ ರೂಪಾಯಿ ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಲಾಗಿದೆ. ಗುರುಮಠಕಲ್ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ವೀರಣ್ಣ ಒಂದು ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜಾಕೀರ್ ನಮ್ಮದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವೀರಣ್ಣ ದೊಡ್ಡಮನಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ರೈತರೇ ಗಮನಿಸಿ : ಭೂಮಿ ತಂತ್ರಾಂಶದಲ್ಲಿ `ಪಹಣಿ’ ಸೃಜನೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶಭಾರತ್ ಜೋಡೋ ಯಾತ್ರೆ; ದೇಶದ ಜನಸಾಮಾನ್ಯರ ಸಂಕಷ್ಟಕ್ಕೆ ಸಿಕ್ಕ ಪರಿಹಾರ: ಸಿಎಂ ಡಿ ಕೆ ಶಿವಕುಮಾರ್ ಅಭಿಮತBIG NEWS : ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತಪೆಟ್ಟಿಗೆಗಳ ಮಾಹಿತಿ ಸಲ್ಲಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೋರಿ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕಸೆ.11ರಂದು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪರಾಜ್ಯದ ಮುಜರಾಯಿ ದೇವಾಲಯಗಳ ಅರ್ಚಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ 1 ಲಕ್ಷದವರೆಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಭಾರತ ರತ್ನ ಪ್ರೊ.ಸಿ.ಎನ್.ರಾವ್ ಅವರಿಗೆ ಯಾವುದೇ ನೋಟಿಸ್ ಜಾರಿ ಮಾಡಿಲ್ಲ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆಆರೋಗ್ಯ ಇಲಾಖೆಯಲ್ಲಿ 51 ಮಂದಿಗೆ ಉದ್ಯೋಗ ಭಾಗ್ಯಅಪಘಾತದಲ್ಲಿ ಮೃತಪಟ್ಟ NHM ನೌಕರನ ಕುಟುಂಬಕ್ಕೆ ₹68 ಲಕ್ಷ ವಿಮೆ ಪರಿಹಾರ ಹಸ್ತಾಂತರ: ಇದು KSHCOEA - BMS ಸಂಘದ ಶ್ರಮಕ್ಕೆ ಸಂದ ಜಯ