ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ದುಬೈನಿಂದ ಆಗಮಿಸಿದ ಪ್ರಯಾಣಿಕನನ್ನು ವಿಚಾರಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಗೊತ್ತಾಗಿದೆ. 4 ಕ್ಯಾಪ್ಸೂಲ್ಸ್ಗಳಲ್ಲಿ 1.37 ಕೋಟಿ ರೂ. ಮೌಲ್ಯದ 899.50 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಮತ್ತೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಬಳಿ 1.75 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಗೈದ್ದು, ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ.