LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಟ್ ಕಾಯಿನ್ ಕೇಸ್: ಶ್ರೀಕಿ ಸೇರಿ ಮೂವರು 10 ದಿನ ಇಡಿ ಕಸ್ಟಡಿಗೆ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಮೂವರನ್ನು 10 ದಿನ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಶ್ರೀಕಿ, ಸುನಿಲ್ ಹೆಗಡೆ ಮತ್ತು ರಾಬಿನ್ ಖಂಡೇಲವಾಲ್ ಅವರನ್ನು 10 ದಿನ ಇಡಿ ಕಸ್ಟಡಿಗೆ ನೀಡಲಾಗಿದೆ. ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶರಾದ ಶಂಕರಪ್ಪ ನಿಂಬಣ್ಣ ಕಲ್ಮಣಿ ಅವರು ಮೂವರು ಆರೋಪಿಗಳನ್ನು ಇಡಿ ವಶಕ್ಕೆ ನೀಡಿದ್ದಾರೆ.

ಬಂಧಿತ ಆರೋಪಿಗಳನ್ನು ಶನಿವಾರ ಬೆಳಗ್ಗೆ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ನ್ಯಾಯಾಧೀಶರ ಗೃಹ ಕಚೇರಿಯಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಶ್ರೀಕಿ ಪರ ವಕೀಲರು ವೈದ್ಯಕೀಯ ದಾಖಲೆ ಸಲ್ಲಿಸಿ ಆರೋಪಿಯ ಮಾನಸಿಕ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ಕೋರಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು ಇಡಿ ವಶಕ್ಕೆ ಒಪ್ಪಿಸಿದ್ದಾರೆ.

ಇಡಿ ಕರ್ನಾಟಕ ಸರ್ಕಾರದ ಇ- ಪ್ರೊಕ್ಯೂರ್ಮೆಂಟ್ ಪೋರ್ಟಲ್ ನಿಂದ 11.5 ಕೋಟಿ ರೂ. ಕದ್ದಿರುವುದು, ಭಾರತದ ಗೇಮಿಂಗ್ ವೆಬ್ಸೈಟ್ ಗಳ ಹ್ಯಾಕಿಂಗ್ ಮತ್ತು ವಿದೇಶದಲ್ಲಿ ಕ್ರಿಪ್ಟೋ ಕರೆನ್ಸಿ ಬದಲಾವಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ. ಇತ್ತೀಚೆಗೆ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮನೆಯಲ್ಲಿಯೂ ಇಡಿ ಶೋಧ ನಡೆಸಿತ್ತು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಪ್ರೇಮದ ಊರಲಿ’ ಚಿತ್ರದ ಟಿವಿ ಹಾಗೂ OTT ಪ್ರಸಾರ ಹಕ್ಕುಗಳ ಕುರಿತು ಚಿತ್ರ ತಂಡದಿಂದ ಅಧಿಕೃತ ಸ್ಪಷ್ಟನೆಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ ಕೆ ಶಿವಕುಮಾರ್BREAKING: ಕೊಡಗಿನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ತೀರ್ಥರೂಪಿಣಿಯಾಗಿ 'ಕಾವೇರಿ ಮಾತೆ' ದರ್ಶನ | Talakaveriಮಾಯಾ ಜಿಂಕೆಯಂತೆ ಬಣ್ಣ ಬದಲಿಸುತ್ತಾ ಮಾರುಕಟ್ಟೆಗೆ ಲಗ್ಗೆ ಇಟ್ಟ ರಾಯಲ್ ಎನ್ ಫೀಲ್ಡ್: ಕ್ಲಾಸಿಕ್ 650 ಹೈಪರ್‌ಶಿಫ್ಟ್ ಎಡಿಷನ್ ಬಿಡುಗಡೆನೀವು ಅನಾರೋಗ್ಯದಿಂದ ಬಳಲುತ್ತೀದ್ದೀರಾ? ಈ ಮಂತ್ರ ಪಠಿಸಿ ನೋಡಿ, ಆರೋಗ್ಯ ವೃದ್ಧಿ ಗ್ಯಾರಂಟಿBREAKING: ವಿಧಾನ ಪರಿಷತ್ ಚುನಾವಣೆ ಹಿನ್ನಲೆ: ಅ.23ರಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರುಸಿದ್ದರಾಮಯ್ಯ ಅವರೇ ನಿಮ್ಮ ರಕ್ತ ಕುದಿಯುತ್ತಿಲ್ವಾ?: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನೆಅರ್ಥಪೂರ್ಣವಾಗಿ ವಾಲ್ಮೀಕಿ ಜಯಂತಿ ಆಚರಿಸಲು ನಿರ್ಧಾರ: ಸಚಿವ ಟಿ.ರಘುಮೂರ್ತಿರಾಜ್ಯ ಸರ್ಕಾರದಿಂದ 8 IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ | IAS Officer Transferಸಾಗರದಲ್ಲಿ ಶೇ.60 ಕನ್ನಡ ನಾಮಫಲಕ ಕಡ್ಡಾಯಕ್ಕೆ ಜಮೀಲ್ ಸಾಗರ್ ಆಗ್ರಹ: ಎಸಿಗೆ ಮನವಿ