LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಮತ್ತು ನಗರ ಪುನರ್ವಸತಿ ಯೋಜನೆಯಡಿ ಉದ್ಯೋಗ : ರೂ. 10,000 ಗೌರವಧನ!

ಮಡಿಕೇರಿ : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಯುಆರ್‍ಡಬ್ಲ್ಯು/ವಿಆರ್‍ಡಬ್ಲ್ಯು ಹುದ್ದೆಗಳು ಖಾಲಿ ಇದ್ದು ಬೌದ್ಧಿಕ ವಿಕಲತೆ ಹಾಗೂ ಮಾನಸಿಕ ಅಸ್ವಸ್ಥರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಮೇ, 30 ರೊಳಗೆ ಅರ್ಜಿ ಸಲ್ಲಿಸಬಹುದು.

ನಗರದ ಪುನರ್ವಸತಿ ಕಾರ್ಯಕರ್ತರು (ಯುಆರ್‍ಡಬ್ಲ್ಯು) ಹುದ್ದೆಗೆ ಮಾಸಿಕ ಗೌರವಧನ ರೂ.10 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ, ವಿಕಲತೆಯ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್‍ಡಬ್ಲ್ಯು) ಹುದ್ದೆಗೆ ಮಾಸಿಕ ಗೌರವಧನ 10 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ವಿಕಲತೆಯ ಪ್ರಮಾಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.

ಯುಆರ್‍ಡಬ್ಲ್ಯು ಹುದ್ದೆಗಳು ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಹಾಗೂ ವಿಆರ್‍ಡಬ್ಲ್ಯು ಹುದ್ದೆಗಳು ಮಡಿಕೇರಿ ತಾಲ್ಲೂಕಿನ ಹಾಕತ್ತೂರು, ಮುರ್ನಾಡು, ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಹಾಗೂ ವಿರಾಜಪೇಟೆ ತಾಲ್ಲೂಕಿನ ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ಕಾನೂರು, ಶ್ರೀಮಂಗಲದಲ್ಲಿ ಖಾಲಿ ಇರುತ್ತದೆ. ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಿಂದ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂ.ಸಂ.08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

See translation

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ