LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಭರಣ ಪ್ರಿಯರಿಗೆ ಡಬಲ್ ಧಮಾಕಾ :ಚಿನ್ನ-ಬೆಳ್ಳಿ ಬೆಲೆ ಭಾರೀ ಇಳಿಕೆ: 10 ಗ್ರಾಂ ಚಿನ್ನಕ್ಕೆ ₹760 ಕಡಿತ, ಬರೋಬ್ಬರಿ ₹5,000 ಅಗ್ಗವಾದ ಬೆಳ್ಳಿ

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ ಭಾರತೀಯ ಬುಲಿಯನ್ ಮಾರುಕಟ್ಟೆಯಲ್ಲಿ ಆಭರಣ ಪ್ರಿಯರು ಹಾಗೂ ಹೂಡಿಕೆದಾರರಿಗೆ ಸುವರ್ಣ ಅವಕಾಶ ಲಭಿಸಿದೆ. ಶುಕ್ರವಾರ ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯತ್ತ ಮುಖ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದ್ದ ಬೆಳ್ಳಿಯ ದರದಲ್ಲಿ ಇಂದು ಬರೋಬ್ಬರಿ ಕೆಜಿಗೆ 5,000 ರೂಪಾಯಿಗಳಷ್ಟು ಭಾರಿ ಕುಸಿತ ಕಂಡಿದೆ.

ಅಮೆರಿಕ ಹಾಗೂ ಇರಾನ್ ನಡುವಿನ ಜಾಗತಿಕ ಸಂಘರ್ಷ ಮತ್ತೆ ಉಲ್ಬಣಗೊಂಡು ತೈಲ ದರಗಳು ಏರಿಕೆಯಾಗಿರುವುದು ಮತ್ತು ಅಮೂಲ್ಯ ಲೋಹಗಳ ಮೇಲಿನ ಹೂಡಿಕೆದಾರರ ಒಲವು ತಾತ್ಕಾಲಿಕವಾಗಿ ಕಡಿಮೆಯಾಗಿರುವುದು ಮಾರುಕಟ್ಟೆಯಲ್ಲಿ ಈ ದಿಢೀರ್ ದರ ಕುಸಿತಕ್ಕೆ ಪ್ರಮುಖ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಇಂದಿನ ಮಾರುಕಟ್ಟೆ ವಹಿವಾಟಿನ ಪ್ರಕಾರ 18, 22 ಹಾಗೂ 24 ಕ್ಯಾರೆಟ್ ಚಿನ್ನದ ದರಗಳ ಸಂಪೂರ್ಣ ವಿವರ ಇಲ್ಲಿದೆ:

22 ಕ್ಯಾರೆಟ್ ಆಭರಣ ಚಿನ್ನ

1 ಗ್ರಾಂ ಬೆಲೆ: ₹13,065

10 ಗ್ರಾಂ ಬೆಲೆ: ₹1,30,650

ದರ ವ್ಯತ್ಯಾಸ: 10 ಗ್ರಾಂಗೆ ₹700 ಇಳಿಕೆ

24 ಕ್ಯಾರೆಟ್ ಶುದ್ಧ ಚಿನ್ನ (Pure Gold):

1 ಗ್ರಾಂ ಬೆಲೆ: ₹14,253

10 ಗ್ರಾಂ ಬೆಲೆ: ₹1,42,530

ದರ ವ್ಯತ್ಯಾಸ: 10 ಗ್ರಾಂಗೆ ₹760 ಇಳಿಕೆ

18 ಕ್ಯಾರೆಟ್ ಚಿನ್ನ (18K Gold):

1 ಗ್ರಾಂ ಬೆಲೆ: ₹10,690

10 ಗ್ರಾಂ ಬೆಲೆ: ₹1,06,900

ದರ ವ್ಯತ್ಯಾಸ: ಪ್ರಸ್ತುತ ಮಾರುಕಟ್ಟೆ ದರ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ

ಬೆಂಗಳೂರು ₹1,42,530

ನಾಗ್ಪುರ ₹1,42,530

ಮುಂಬೈ ₹1,42,530

ಚೆನ್ನೈ ₹1,42,910

ಕೋಲ್ಕತ್ತಾ ₹1,42,530

ಪಾಟ್ನಾ ₹1,42,580

ಸೂರತ್‌ ₹1,42,580

ಚಂಡೀಗಢ ₹1,42,680

ಲಕ್ನೋ ₹1,42,680

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ