LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ: 122 ತಾಲೂಕುಗಳಲ್ಲಿ ಕುಡಿಯುವ ನೀರಿಗೂ ಅಭಾವ: ಸೂಪರ್ ಎಲ್ ನಿನೋ ಆತಂಕ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಎಂಟ್ರಿಕೊಟ್ಟು ಹಲವು ದಿನಗಳು ಕಳೆದರೂ ಸಮರ್ಕವಾಗಿ ಮಳೆಯಾಗುತ್ತಿಲ್ಲ. ಮಳೆ ಕೊರತೆತೆಯಿಂದಾಗಿ ರಾಜ್ಯದ ಹಲವೆಡೆ ರೈತರು ಕಂಗಾಲಾಗಿದ್ದಾರೆ, ಮತ್ತೊಂದೆಡೆ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದೆ. ಮಳೆಗಾಲದ ಆರಂಭದ ದಿನಗಳಲ್ಲಿಯೇ ಈ ಸ್ಥಿತಿ ಎದುರಾಗಿರುವಾಗ ಇನ್ನು ಮುಂದಿನ ದಿನಗಳಲ್ಲಿ ಜನರು ಹನಿ ನೀರಿಗೂ ಪರದಾಡುವ ಸ್ಥಿತಿ ಎದುರಾಗುವ ಆತಂಕವಿದೆ.

ಈ ವರ್ಷದ ನೈಋತ್ಯ ಮುಂಗಾರು ಆರಂಭದ ಮೊದಲ ತಿಂಗಳಿನಲ್ಲೇ ರಾಜ್ಯಕ್ಕೆ ಆಘಾತ ನೀಡಿದೆ. ೦ಭಾರತೀಯ ಹವಾಮಾನ ಇಲಾಖೆ ಮತ್ತು ಹವಾಮಾನ ತಜ್ಞರು ಇದನ್ನು ‘ವಿಫಲ ಮುಂಗಾರು’ ಎಂದು ಘೋಷಿಸಿದ್ದಾರೆ. ಜೂನ್ ತಿಂಗಳಿನಲ್ಲಿ ಇಡೀ ಕರ್ನಾಟಕದಲ್ಲಿ ಸರಾಸರಿ ಶೇ 41 ರಷ್ಟು ಮಳೆ ಕೊರತೆ ಕಂಡುಬಂದಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರೀಕ್ಷಿತ ಪ್ರಮಾಣದ ಪೂರಕ ವಾತಾವರಣ ರೂಪುಗೊಳ್ಳದ ಕಾರಣ ಮುಂಗಾರು ಮಾರುತಗಳು ತೀರಾ ದುರ್ಬಲಗೊಂಡಿದ್ದು, ಇದು ದೇಶ ಹಾಗೂ ರಾಜ್ಯದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುವ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಅಧಿಕೃತ ದತ್ತಾಂಶಗಳ ಪ್ರಕಾರ, ಜೂನ್ 25 ರ ಅವಧಿಗೆ ರಾಜ್ಯದಲ್ಲಿ ವಾಡಿಕೆಯಾಗಿ 162.5 ಮಿಮೀ ಮಳೆಯಾಗಬೇಕಿತ್ತು. ಆದರೆ ಕೇವಲ 95.2 ಮಿಮೀ ಮಳೆ ದಾಖಲಾಗಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 89 ಮಿಮೀ ವಾಡಿಕೆ ಮಳೆ ಬದಲಾಗಿ ಕೇವಲ 66 ಮಿಮೀ ಮಳೆಯಾಗಿದೆ.

ಈ ಬಾರಿ ಮುಂಗಾರು ವೈಫಲ್ಯಕ್ಕೆ ಎಲ್ ನಿನೋ (El Nino) ಪ್ರಭಾವ ಪ್ರಮುಖವಾಗಿದೆ ಎಂದು ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಮುಂಗಾರು ಅವಧಿಯಲ್ಲೂ ಮಳೆ ಮಾರುತಗಳು ದುರ್ಬಲವಾಗಿರುವುದರಿಂದ ರಾಜ್ಯದ ಹಲವೆಡೆ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇತ್ತೀಚೆಗೆ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದಲ್ಲಿ ಶೇ 50 ರಷ್ಟು ಮತ್ತು ಬೆಂಗಳೂರಿನಲ್ಲಿ ಶೇ 25 ರಷ್ಟು ಮಳೆ ಕೊರತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಳೆಯ ತೀವ್ರ ಕೊರತೆ ಮತ್ತು ನೀರಿನ ಬಿಕ್ಕಟ್ಟಿನ ಆತಂಕದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ‘ಸೂಪರ್ ಎಲ್ ನಿನೋ’ ಪ್ರಭಾವದಿಂದಾಗಿ ಮುಂಬರುವ ತಿಂಗಳುಗಳಲ್ಲಿ ರಾಜ್ಯದಲ್ಲಿ ಎದುರಾಗಬಹುದಾದ ಭೀಕರ ಬರಗಾಲದಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಸದ್ಯ ರಾಜ್ಯದ 122 ತಾಲೂಕುಗಳು ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿವೆ. ಈ ಪೈಕಿ 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, 669 ಹಳ್ಳಿಗಳ ದಾಹ ನೀಗಿಸಲು 789 ಖಾಸಗಿ ಬೋರ್‌ವೆಲ್‌ಗಳನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ತಜ್ಞರು ಕ್ಲೌಡ್ ಸೀಡಿಂಗ್ ಅಥವಾ ಮೋಡ ಬಿತ್ತನೆ ಸದ್ಯಕ್ಕೆ ಅಸಾಧ್ಯ ಎಂದಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ದೀರ್ಘಾವಧಿಯ ಬರ ನಿರ್ವಹಣಾ ಯೋಜನೆಗಳನ್ನು ರೂಪಿಸಬೇಕಾದ ಅಗತ್ಯವಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ