LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೆಐಎಯಲ್ಲಿ 13.14 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ: 6 ಪ್ರಯಾಣಿಕರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಜಪ್ತಿ ಮಾಡಿದ್ದಾರೆ.

ಕಸ್ಟಮ್ಸ್ ಇಲಾಖೆಯ ತಪಾಸಣೆ ವೇಳೆ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ಸಂಬಂಧ 6 ಪ್ರಯಾಣಿಕರನ್ನು ಬಂಧಿಸಲಾಗಿದೆ.

ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, ಜೂನ್ 11, 2026ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ 5 ಜನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಕಳ್ಳಸಾಗಣೆ ಬೆಳಕಿಗೆ ಬಂದಿದೆ. ಈ ಆರೋಪಿಗಳು ವಿಮಾನ ನಿಲ್ದಾಣದಲ್ಲಿ ತಪಾಸಣೆಯಿಂದ ತಪ್ಪಿಸಿಕೊಳ್ಳಲು ತಮ್ಮ ಚೆಕ್-ಇನ್ ಬ್ಯಾಗೇಜ್‌ಗಳ ಒಳಗೆ ಗಾಂಜಾವನ್ನು ಅಡಗಿಸಿಟ್ಟಿದ್ದರು.

ಅಧಿಕಾರಿಗಳು ಬ್ಯಾಗ್‌ಗಳನ್ನು ಕೂಲಂಕಷವಾಗಿ ಸ್ಕ್ಯಾನ್ ಮಾಡಿದಾಗ ಒಟ್ಟು 24.8 ಕೆಜಿ ತೂಕದ ಅತ್ಯಾಧುನಿಕ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಅಂತರರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಸುಮಾರು 8.68 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು, ಐದೂ ಜನರನ್ನು ಬಂಧಿಸಲಾಗಿದೆ.

ಜೂನ್ 13, 2026ರಂದು ಬ್ಯಾಂಕಾಕ್‌ನಿಂದಲೇ ಬಂದ ಮತ್ತೊಂದು ವಿಮಾನದ ಪ್ರಯಾಣಿಕನ ಮೇಲೆ ಕಸ್ಟಮ್ಸ್ ಕಣ್ಣಿಟ್ಟಿತ್ತು. ಬೆಂಗಳೂರಿಗೆ ಬಂದಿಳಿದ ಓರ್ವ ಶಂಕಿತ ಪ್ರಯಾಣಿಕನನ್ನು ತಡೆದು ಆತನ ಚೆಕ್-ಇನ್ ಬ್ಯಾಗ್ ಹಾಗೂ ಹ್ಯಾಂಡ್ ಲಗೇಜ್ ಬ್ಯಾಗ್‌ಗಳನ್ನು ಪರಿಶೀಲಿಸಿದಾಗ ಬ್ಯಾಗ್‌ನಲ್ಲೂ ಕೂಡ ವ್ಯಾಕ್ಯೂಮ್ ಪ್ಯಾಕ್ ಮಾಡಲಾಗಿದ್ದ 13.54 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಒಟ್ಟು ಮೌಲ್ಯ 4.74 ಕೋಟಿ ರೂ. ಆಗಿದೆ.

ಈ ಎರಡೂ ಪ್ರತ್ಯೇಕ ಕಾರ್ಯಾಚರಣೆಗಳಿಂದ ಕಸ್ಟಮ್ಸ್ ಇಲಾಖೆಯು ಒಟ್ಟು 13.14 ಕೋಟಿ ರೂ. ಮೌಲ್ಯದ 38.34 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದಂತಾಗಿದೆ. ಬಂಧಿತ 6 ಜನ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಾದ ಎನ್‌ಡಿಪಿಎಸ್ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ