LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತರ ಖಾತೆಗೆ ಸಂದಾಯವಾಗಿದ್ದ 15.24 ಕೋಟಿ ರೂ. ವಾಪಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾದ ವಿಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 15.24 ಕೋಟಿ ರೂ. ಹಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಉಳಿದ ಹಣವನ್ನು ವಾಪಸ್ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪ್ರಕ್ರಿಯೆ ಮುಂದುವರೆಸಿದೆ.

1,94,560 ಮಹಿಳೆಯರು ಐಟಿ ಪಾವತಿ, ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸಿರುವ ಮಾಹಿತಿ ಗೊತ್ತಾಗಿದೆ. ಗೃಹಲಕ್ಷ್ಮಿಗೆ ನೋಂದಾಯಿಸಿಕೊಂಡಿದ್ದ 2,88,376 ಮಹಿಳೆಯರು ಮೃತಪಟ್ಟಿದ್ದಾರೆ. ಮೃತಪಟ್ಟ ಫಲಾನುಭವಿಗಳ ಮಾಹಿತಿಯನ್ನು ಸಕಾಲದಲ್ಲಿ ಪಡೆದು ಅವರನ್ನು ಯೋಜನೆಯಿಂದ ಕೈಬಿಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಮೃತಪಟ್ಟ ಫಲಾನುಭವಿಗಳ ಪೈಕಿ 1,03,922 ಕುಟುಂಬಗಳು ನಿಯಮಾನಸಾರ ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾಯಿಸಿ ಮರು ನೋಂದಣಿ ಮಾಡಿಕೊಂಡು ಧನ ಸಹಾಯ ಪಡೆಯುತ್ತಿದ್ದಾರೆ. ಮೃತಪಟ್ಟವರ ಮಾಹಿತಿ ಸಕಾಲದಲ್ಲಿ ಲಭ್ಯವಾಗದ ಕಾರಣ 1,08,755 ಫಲಾನುಭವಿಗಳ ಖಾತೆಗೆ ಪಾವತಿಸಿದ 115 ಕೋಟಿ ರೂ. ಹಣ ವಾಪಸ್ ಪಡೆಯಲು ಬ್ಯಾಂಕುಗಳ ಜೊತೆಗೆ ಸಭೆ ನಡೆಸಲಾಗಿದೆ. ಸಭೆ ನಡೆಸಿದ ನಂತರ 15.24 ಕೋಟಿ ರೂ. ಸರ್ಕಾರದ ಖಾತೆಗೆ ವಾಪಸ್ ಆಗಿದೆ. ಬಾಕಿ ಮೊತ್ತ ವಸೂಲಾತಿ ಪ್ರಕ್ರಿಯೆ ಪ್ರಗತಿಯಲ್ಲಿ ಇದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ