LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ಗೃಹಜ್ಯೋತಿ ಯೋಜನೆ' : 16 ಲಕ್ಷ ಗ್ರಾಹಕರು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆ : ಅಕ್ಟೋಬರ್ 31 ಕೊನೆಯ ದಿನಾಂಕ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆಯಡಿ ನೋಂದಾಯಿಸಿಕೊಂಡಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯ ಸುಮಾರು 16 ಲಕ್ಷ ಫಲಾನುಭವಿಗಳು ಯೋಜನೆಯ ಲಾಭದಿಂದ ಹೊರಗುಳಿಯುವ ಭೀತಿ ಎದುರಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 69 ಲಕ್ಷ ಫಲಾನುಭವಿಗಳಿದ್ದು, ಈ ಪೈಕಿ 16 ಲಕ್ಷ ಜನರ ನಿಖರ ಹಾಗೂ ಸಮಗ್ರ ಮಾಹಿತಿ ಇನ್ನು ಕೂಡ ಬೆಸ್ಕಾಂ ಅಧಿಕಾರಿಗಳ ಕೈಸೇರಿಲ್ಲ. ಇದರಿಂದಾಗಿ ಯೋಜನೆಯ ಮರುಪರಿಶೀಲನಾ ಪ್ರಕ್ರಿಯೆಗೆ ಹಿನ್ನಡೆಯಾಗಿದ್ದು, ಅರ್ಹರಲ್ಲದವರನ್ನು ಪಟ್ಟಿಯಿಂದ ಹೊರಗಿಡಲು ಸಿದ್ಧತೆ ನಡೆಸಲಾಗಿದೆ.

ಬೆಸ್ಕಾಂ ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ಸತ್ಯಾಸತ್ಯತೆ ಪರಿಶೀಲನೆಗಾಗಿ ಸತತ ಮೂರು ಬಾರಿ ಮನೆಗಳಿಗೆ ಭೇಟಿ ನೀಡಿದ್ದರೂ ಹಲವು ಕಡೆ ಫಲಾನುಭವಿಗಳು ಸಿಕ್ಕಿಲ್ಲ. ಅನೇಕ ಮನೆಗಳಿಗೆ ಬೀಗ ಹಾಕಿರುವುದು, ಬಾಡಿಗೆದಾರರು ಮನೆ ಖಾಲಿ ಮಾಡಿರುವುದು ಅಥವಾ ಬೇರೆಡೆ ವಾಸ್ತವ್ಯ ಬದಲಾಯಿಸಿರುವುದು ಕಂಡುಬಂದಿದೆ. ಇದರ ಜೊತೆಗೆ ತೆರಿಗೆ ಪಾವತಿದಾರರು ಹಾಗೂ ಹೊರರಾಜ್ಯದ ಮೂಲದ ಕೆಲ ಗ್ರಾಹಕರು ತಮ್ಮ ಆಧಾರ್ ಮತ್ತು ಇತರ ವೈಯಕ್ತಿಕ ದಾಖಲೆಗಳನ್ನು ನೀಡಲು ಹಿಂದೇಟು ಹಾಕುತ್ತಿರುವುದು ಕೂಡ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಮಾಹಿತಿ ಲಭ್ಯವಾಗದ ಗ್ರಾಹಕರಿಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 31 ಅನ್ನು ಕೊನೆಯ ಅವಕಾಶವಾಗಿ ನಿಗದಿಪಡಿಸಲಾಗಿದೆ. ಗ್ರಾಹಕರು ತಕ್ಷಣವೇ ತಮ್ಮ ವ್ಯಾಪ್ತಿಯ ಬೆಸ್ಕಾಂ ಉಪವಿಭಾಗೀಯ (Sub-division) ಕಚೇರಿಗೆ ತೆರಳಿ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ನೀಡಿ ನೋಂದಣಿಯನ್ನು ದೃಢಪಡಿಸಿಕೊಳ್ಳಬೇಕು. ನಿಗದಿತ ದಿನಾಂಕದೊಳಗೆ ಮಾಹಿತಿ ನೀಡಿದವರ ಪ್ರತ್ಯೇಕ ಪಟ್ಟಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಒಂದು ವೇಳೆ ಅಕ್ಟೋಬರ್ 31ರ ಒಳಗಾಗಿ ಮಾಹಿತಿ ನೀಡದಿದ್ದರೆ ಅಂತಹವರನ್ನು ಗೃಹಜ್ಯೋತಿ ಯೋಜನೆಯಿಂದ ಅಂತಿಮವಾಗಿ ಹೊರಗಿಡಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!