ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ಮಾಲೀಕರಿಗೆ ಮೊದಲ ಹಂತದಲ್ಲಿ 18000 ನಿವೇಶನಗಳನ್ನು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅಂದಾಜು 3052 ಭೂ ಮಾಲೀಕರು ತಮ್ಮ ಆಸ್ತಿಯನ್ನು ಶಿವರಾಮ ಕಾರಂತ ಬಡಾವಣೆಗೆ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು 18000 ನಿವೇಶನಗಳನ್ನು ಭೂಮಾಲೀಕರಿಗೆ ನೀಡಲಾಗುತ್ತಿದೆ. ಮೇ 15 ಮಾಲೀಕರು ನಿವೇಶನ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರೀಯ ಇ ಗವರ್ನೆನ್ಸ್ ಸಾಫ್ಟ್ವೇರ್ ಅಭಿವೃದ್ಧಿಪಡಿಸಿ ಅದರ ಮೂಲಕ ನಿವೇಶನ ಹಂಚಿಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.