LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ನೀರು ಬಿಟ್ಟರೆ ಸಂಘರ್ಷವಾಗುತ್ತೆ: 1991ರ ಮಾದರಿ ಕ್ರಾಂತಿ ಮಾಡಬೇಕಾಗುತ್ತೆ: ಕರವೇ ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ಕಾವೇರಿ ನದಿ ನೀರು ವಿಚಾರಕ್ಕೆ ಸಂಂಬಂಧಿಸಿದಂತೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರಿನಂತೆ 15 ದಿನಗಳವರೆಗೆ 4 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಖಂಡಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲ ಆರಂಭವಾಗಿದೆ. ಮುಂಗಾರು ಕೈಕೊಟ್ಟು, ಕುಡಿಯುವ ನೀರಿಗೂ ಸಮಸ್ಯೆಯಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ ನೀಡಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದು ಎಂದರು.

ಹಾಗೊಂದುವೇಳೆ ತಮಿಳುನಾಡಿಗೆ ಒಂದು ಹನಿ ನೀರು ಹರಿದರೂ 1991ರ ಮಾದರಿಯ ಕಾವೇರಿ ಸಂಘರ್ಷ ಮತ್ತೆ ನಡೆಸಬೇಕಾಗುತ್ತದೆ. ಅಂತಹ ಸ್ಥಿತಿಯನ್ನು ಸರ್ಕಾರ ಮತ್ತೆ ತರಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಜನರ ಹಿತ ಬಲಿ ಕೊಟ್ಟು ತಮಿಳುನಾಡಿಗೆ ನೀರು ಬಿಟ್ಟರೆ 1991ರ ಮಾದರಿಯಲ್ಲೇ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ. ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ತಿಳಿಸಿದ್ದಾರೆ.

ಸಿಡಬ್ಲ್ಯುಆರ್‌ಸಿ ನೇರವಾಗಿ ಆದೇಶಿಸುವ ಬದಲು ಕಾವೇರಿ ಜಲಾನಯನ ಪ್ರದೇಶಕ್ಕೆ ಸಮಿತಿ ಕಳುಹಿಸಿ, ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಆದೇಶ ನೀಡಬೇಕಿತ್ತು. ಮಳೆ ಇಲ್ಲದೆ ಮಂಡ್ಯ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆ. ತಮಿಳುನಾಡು ಕೇಂದ್ರದ ಮೇಲೆ ಒತ್ತಡ ತಂದು ಪದೇ ಪದೇ ನೀರು ಪಡೆಯಲು ಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ