LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಜಿ ಡೆಂಟಲ್: 2ನೇ ಸುತ್ತಿನ ಕೌನ್ಸೆಲಿಂಗ್ ಸೆ.19ರಿಂದ ಆರಂಭ

ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದ್ದು ಶನಿವಾರದಿಂದ ಪ್ರಕ್ರಿಯೆ ಆರಂಭವಾಗಲಿದೆ.

ಮೊದಲ ಸುತ್ತಿನಲ್ಲಿ ಚಾಯ್ಸ್-3 ಆಯ್ಕೆ ಮಾಡಿರುವ ಹಾಗೂ ಇತರ ಚಾಯ್ಸ್ ದಾಖಲಿಸಿರುವ ಅಭ್ಯರ್ಥಿಗಳು ಎರಡನೇ ಸುತ್ತಿಗೆ ಅರ್ಹತೆ ಪಡೆಯಲು ಸೆ.19ರಿಂದ 22ರವರೆಗೆ 1,00,000 (SC/ST ಅಭ್ಯರ್ಥಿಗಳು 50,000) ಕಾಷನ್ ಡೆಪಾಸಿಟ್ ಪಾವತಿಸಬೇಕು. ಅದರ ಬಳಿಕವೇ ಆಪ್ಷನ್ಸ್ ದಾಖಲಿಸಲು ಅವಕಾಶ‌ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಮೊದಲ ಸುತ್ತಿನಲ್ಲಿ ಚಾಯ್ಸ್ -2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಕಾಷನ್ ಡೆಪಾಸಿಟ್ ಮಾಡುವ ಅಗತ್ಯ ಇರುವುದಿಲ್ಲ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಅಭ್ಯರ್ಥಿಯು ಪಾವತಿಸಿರುವ ಕಾಷನ್ ಡೆಪಾಸಿಟ್ ಅನ್ನು ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಅವರು‌ ವಿವರಿಸಿದ್ದಾರೆ.

ಸೆ.19ರಂದು ಬೆಳಿಗ್ಗೆ ‌11ಕ್ಕೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಸೆ.19ರಿಂದ‌ 23ರವರೆಗೆ ಆಪ್ಷನ್ಸ್ ಬದಲಿಸಲು/ಅಳಿಸಲು/ಮಾರ್ಪಡಿಸಲು ಅವಕಾಶ ನೀಡಲಾಗಿದೆ. ಸೆ.23ರಂದು ಸಂಜೆ 4ಕ್ಕೆ ತಾತ್ಕಾಲಿಕ ಹಾಗೂ ಸೆ.24ರಂದು ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.24ರಿಂದ 28ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬೇಕು. ಹಾಗೆಯೇ ಇದೇ ಅವಧಿಯಲ್ಲಿ ಮೂಲ ದಾಖಲೆಗಳನ್ನು ಕೆಇಎ ಕಚೇರಿಯಲ್ಲಿ ಖುದ್ದು ಸಲ್ಲಿಸಬೇಕು. ಬಳಿಕ ಅಭ್ಯರ್ಥಿಗಳು ಸೆ. 29ರವರೆಗೆ ಪ್ರವೇಶ ಆದೇಶವನ್ನು ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಲ್ಲಿ ಹಾಜರಾಗಬೇಕು ಎಂದು ಅವರು ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING: ಗ್ರಾಮ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಡಿಸೆಂಬರ್ ಒಳಗೆ ಎಲೆಕ್ಷನ್ಕ್ಯೂ ನಿಲ್ಲೋದು ಬೇಡ, ಆ್ಯಪ್ ಬೇಕಿಲ್ಲ: ಇನ್ಮುಂದೆ ವಾಟ್ಸಾಪ್‌ನಲ್ಲೇ ಹೀಗೆ KSRTC ಬಸ್ ಟಿಕೆಟ್ ಬುಕ್ ಮಾಡಿ!ರಾಜ್ಯದ 'ಅರಣ್ಯವಾಸಿ'ಗಳಿಗೆ 'ಸಿಎಂ ಡಿ.ಕೆ ಶಿವಕುಮಾರ್' ಗುಡ್ ನ್ಯೂಸ್ಪಿಜಿ ಡೆಂಟಲ್: 2ನೇ ಸುತ್ತಿನ ಕೌನ್ಸೆಲಿಂಗ್ ಸೆ.19ರಿಂದ ಆರಂಭರಾಜ್ಯದ SC ಸಮುದಾಯದವರಿಗೆ ಗುಡ್ ನ್ಯೂಸ್: ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನರೈತರ ಸಮಸ್ಯೆ ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಸರ್ಕಾರಕ್ಕೆ ವ್ಯವಧಾನವೇ ಇಲ್ಲ: ಬಿ.ವೈ.ವಿಜಯೇಂದ್ರ7ನೇ ತರಗತಿ ಉತ್ತೀರ್ಣರಾದವರ ಗಮನಕ್ಕೆ: ಡೆಹರಾಡೂನ್‍ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಮುಂದಿನ ದಿನಗಳಲ್ಲಿ ರಾಜ್ಯದ 10-12 ಕಡೆ ಸಚಿವ ಸಂಪುಟ ಸಭೆ: ಸಿಎಂ ಡಿ.ಕೆ ಶಿವಕುಮಾರ್ಹೀಗಿದೆ ಇಂದಿನ ಮಂಗಳೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meetingಮಂಗಳೂರು ನೂತನ ಕೇಂದ್ರ ಕಾರಾಗೃಹದ ಮುಖ್ಯ ಗೋಡೆ ನಿರ್ಮಾಣಕ್ಕೆ ₹10 ಕೋಟಿ ಅನುದಾನಕ್ಕೆ ಸಂಪುಟ ಅನುಮೋದನೆ