LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೊರಬ ಕ್ಷೇತ್ರದಲ್ಲಿ ₹2.30 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಭೂಮಿಪೂಜೆ

ಶಿವಮೊಗ್ಗ: ಜಿಲ್ಲೆಯ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ₹2.30 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಸೊರಬ ಲೋಕೋಪಯೋಗಿ ಇಲಾಖೆ ಉಪವಿಭಾಗದ ವತಿಯಿಂದ ಹರೀಶಿ ಭಾಗದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸುಮಾರು ₹1.80 ಕೋಟಿ ವೆಚ್ಚದ ಎರಡು ಪ್ರಮುಖ ಕಾಮಗಾರಿಗಳಿಗೆ ಹಿರೇಕಲಗೋಡು ಗ್ರಾಮದಲ್ಲಿ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.

ಹರೀಶಿ–ದ್ಯಾವಸ–ಈಡೂರು ರಸ್ತೆ ಡಾಂಬರೀಕರಣ ಹಾಗೂ ಇದೇ ಮಾರ್ಗದ ಹಿರೇಕಲಗೋಡು ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗಳು ಇದರಲ್ಲಿ ಸೇರಿವೆ. ಈ ಕಾಮಗಾರಿಗಳಿಂದ ಈ ಭಾಗದ ಗ್ರಾಮಗಳ ಸಂಪರ್ಕ ಹಾಗೂ ಸಂಚಾರ ಮತ್ತಷ್ಟು ಸುಗಮವಾಗಲಿದೆ.

ಇದೇ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸುಮಾರು ₹6 ಕೋಟಿ ವೆಚ್ಚದಲ್ಲಿ ಇನ್ನೂ ನಾಲ್ಕು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೇತುವೆ ಪುನರ್‌ನಿರ್ಮಾಣ, ಕಾಲುಸಂಕ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ಇದರಲ್ಲಿ ಒಳಗೊಂಡಿವೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಚ್ಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕರವಳ್ಳಿ ಗ್ರಾಮದ ಎಸ್‌ಸಿ ಕೇರಿಯಿಂದ ಚಂದ್ರಗುತ್ತಿ ಲೋಕೋಪಯೋಗಿ ರಸ್ತೆವರೆಗೆ ಸುಮಾರು ₹80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡುವ ಕಾಮಗಾರಿಗೂ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಕ್ಷೇತ್ರದ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇಕೆದಾಟು ಯೋಜನೆ ಸ್ಥಳಕ್ಕೆ ತಮಿಳುನಾಡು ನಿಯೋಗವೂ ಬಂದು ಪರಿಶೀಲನೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್ಬರದ ಪರಿಸ್ಥಿತಿ ಪರಿಶೀಲಿಸಲು ಕರ್ನಾಟಕ, ಮಹಾರಾಷ್ಟ್ರಕ್ಕೆ ಕೇಂದ್ರ ತಂಡಗಳ ಭೇಟಿ18 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣಗಳ ಖಾತೆ ತೆರೆಯಲು ನಿರ್ಬಂಧ: ಹೊಸ ನಿಯಮDLಗೆ ಸೆ.30ರೊಳಗೆ ಮೊಬೈಲ್ ನಂಬರ್ ಅಪ್‌ಡೇಟ್ ಮಾಡದಿದ್ದರೆ ಲೈಸೆನ್ಸ್ ರದ್ದಾಗುತ್ತಾ? ವೈರಲ್ ಸುದ್ದಿಯ ಅಸಲಿಯತ್ತು ಇಲ್ಲಿದೆ!ನೇಪಾಳದಲ್ಲಿ ಭಾರಿ ಮಳೆಗೆ ಬೆಟ್ಟ ಕುಸಿದು 24 ಮಂದಿ ಸಾವು, 14 ಜನ ನಾಪತ್ತೆ ; ಭಯಾನಕ ವೀಡಿಯೋ ವೈರಲ್ |WATCH VIDEOUPI ಪೇಮೆಂಟ್‌ಗೆ ಮುನ್ನ ಎಚ್ಚರ! ಹಣ ಕಳುಹಿಸುವಾಗ ಈ ಮಾಹಿತಿ ನಮೂದಿಸುವುದು ಮುಖ್ಯಮತ್ತೆ ಜಾಗತಿಕ ಮಟ್ಟಕ್ಕೆ UPI: ಭಾರತದ ವ್ಯವಸ್ಥೆ ಅಳವಡಿಸಿಕೊಂಡ ಮೊದಲ ಕೆರಿಬಿಯನ್ ರಾಷ್ಟ್ರ ಟ್ರಿನಿಡಾಡ್ ಮತ್ತು ಟೊಬೆಗೊ₹500ಕ್ಕೆ ಲಾಟರಿ ಟಿಕೆಟ್ ಖರೀದಿ.. ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವ್ಯಕ್ತಿ! ಗೆದ್ದ ಹಣ ಎಷ್ಟು ಗೊತ್ತಾ?ಚಲಿಸುತ್ತಿದ್ದ ಬಸ್‌ನಲ್ಲೇ ಗ್ಯಾಂಗ್‌ರೇಪ್; ನಿರ್ಭಯಾ ಪ್ರಕರಣ ಉಲ್ಲೇಖಿಸಿ ಸುಪ್ರೀಂಕೋರ್ಟ್‌ನಿಂದ ಸ್ವಯಂಪ್ರೇರಿತ ವಿಚಾರಣೆಸಚಿನ್‌ರ 100 ಶತಕಗಳ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೆಷ್ಟು ಶತಕ ಬೇಕು? ಲೆಕ್ಕಾಚಾರ ಹೀಗಿದೆ