LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ: DCM ಡಾ. ಜಿ.ಪರಮೇಶ್ವರ್ ಘೋಷಣೆ

ಬೆಂಗಳೂರು: ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸುಮಾರು 45ರಿಂದ 50 ಲಕ್ಷ ರೈತರಿಗೆ ಈ ನೆರವು ತಲುಪಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು ₹1,250 ಕೋಟಿ ವೆಚ್ಚವಾಗಲಿದೆ. ಕೇಂದ್ರದಿಂದ ಎನ್‌ಡಿಆರ್‌ಎಫ್ ನೆರವು ನಿರೀಕ್ಷಿಸುತ್ತಿದ್ದರೂ, ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ತಕ್ಷಣವೇ ನೆರವು ನೀಡುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ಈಗಾಗಲೇ ಹಲವು ರೀತಿಯ ನೆರವು ನೀಡುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ಸುಮಾರು ₹22,000 ಕೋಟಿ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ₹1,250 ಕೋಟಿ ಮೊದಲ ಹಂತದ ನೆರವು ಸಣ್ಣ ಮೊತ್ತವಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ದೊರೆಯುವ ಪರಿಹಾರದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬರದಿಂದ ರಾಜ್ಯದಲ್ಲಿ ಉಂಟಾಗಿರುವ ಒಟ್ಟು ನಷ್ಟದ ಪ್ರಮಾಣ ₹40,000 ಕೋಟಿಗೂ ಅಧಿಕವಾಗುವ ಸಾಧ್ಯತೆಯಿದೆ. ಈಗಾಗಲೇ ಮೊದಲ ಹಂತದ ಮೆಮೊರಾಂಡಂ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೆಮೊರಾಂಡಂಗಳನ್ನು ಸಲ್ಲಿಸಲಾಗುವುದು. ಅಂತಿಮವಾಗಿ ಸಂಪೂರ್ಣ ನಷ್ಟದ ಅಂದಾಜು ಸಿದ್ಧಪಡಿಸಿ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಎಷ್ಟು ಪರಿಹಾರ ಬೇಕು ಎಂಬುದನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡುವ ರೀತಿಯ ಆಧಾರದ ಮೇಲೆ ಮುಂದಿನ ಪರಿಹಾರ ಕ್ರಮಗಳನ್ನು ನಿರ್ಧರಿಸಲಾಗುವುದು. ಈ ಹಂತದಲ್ಲಿ ಪರಿಷ್ಕೃತ ಪರಿಹಾರ ಮೊತ್ತದ ಕುರಿತು ಯಾವುದೇ ಬದ್ಧತೆ ನೀಡಲು ಸಾಧ್ಯವಿಲ್ಲ ಎಂದು ಡಾ. ಪರಮೇಶ್ವರ ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ಒಳಗೊಂಡ ತಂಡವನ್ನು ಕಳುಹಿಸುವ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ತಂಡದ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸಿ, ತನ್ನ ಮಾರ್ಗಸೂಚಿಗಳ ಪ್ರಕಾರ ಬರ ಪರಿಸ್ಥಿತಿ ಹಾಗೂ ನಷ್ಟವನ್ನು ಮೌಲ್ಯಮಾಪನ ಮಾಡಿದ ಬಳಿಕ ಮುಂದಿನ ಪರಿಹಾರದ ಪ್ರಮಾಣ ಸ್ಪಷ್ಟವಾಗಲಿದೆ ಎಂದರು.

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ತಾವು ಸ್ಪಷ್ಟಪಡಿಸಿದ್ದೇವೆ. ಸರ್ವಪಕ್ಷ ಸಭೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ತಿಳಿಸಿದರು. 

ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಬರ ಪರಿಸ್ಥಿತಿ ಹಾಗೂ ರೈತರ ಸಂಕಷ್ಟವನ್ನು ಮನವರಿಕೆ ಮಾಡಿಕೊಡಲಾಗುವುದು. ವಿರೋಧ ಪಕ್ಷದವರು ಬರಲು ಸಿದ್ಧರಿದ್ದರೆ, ಅವರನ್ನು ಸಹ ಜೊತೆಯಲ್ಲಿ ಕರೆದೊಯ್ಯಲು ಸರ್ಕಾರ ಸಿದ್ಧವಾಗಿದೆ. ನಿಯೋಗದ ದೆಹಲಿ ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಮಾಹಿತಿ ನೀಡಿದರು. 

*ವಿಶೇಷಚೇತನರ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯೆ:* ರಾಮನಗರದಲ್ಲಿ ವಿಶೇಷಚೇತನರು ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಸಂಬಂಧಪಟ್ಟ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ತರಬೇಕು. ಮುಖ್ಯಮಂತ್ರಿಗಳು ಹಣಕಾಸು ಸಚಿವರು. ಅವರೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಚಿವ ಸಂಪುಟಕ್ಕೆ ಬಂದಲ್ಲಿ, ಎಲ್ಲರೂ ಸಹಕರಿಸುವುದಾಗಿ ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!