LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಷನ್ ಕಾರ್ಡ್‌ದಾರರಿಗೆ ಸಿಹಿಸುದ್ದಿ: ನಾಳೆಯಿಂದ ರಾಜ್ಯಾಧ್ಯಂತ ಅನ್ನಸೇವೆ ಆ್ಯಪ್ ಸೇವೆ ಲಭ್ಯ, ಅ.20ರೊಳಗೆ e-KYC ಕಡ್ಡಾಯ

ಬೆಂಗಳೂರು: ರಾಜ್ಯದ ಅನ್ನಭಾಗ್ಯ ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಯ ಫಲಾನುಭವಿಗಳು ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲಿನಲ್ಲಿ ನಿಲ್ಲದೆ ಮನೆಯಲ್ಲೇ ಕುಳಿತು ಮೊಬೈಲ್ ಮೂಲಕ e-KYC ಪೂರ್ಣಗೊಳಿಸಲು ನೂತನ ‘ಅನ್ನಸೇವೆ’ ಆ್ಯಪ್ ನೆರವಾಗಲಿದೆ.

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಹಾಗೂ ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಈ ಆ್ಯಪ್ ಅನ್ನು ಆಹಾರ ಸಚಿವ ರಿಜ್ವಾನ್ ಅರ್ಷದ್ ಬಿಡುಗಡೆಗೊಳಿಸಿದ್ದು, ಅಕ್ಟೋಬರ್ 14ರಿಂದ ರಾಜ್ಯದ ಎಲ್ಲ ಜಿಲ್ಲೆಗಳ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಆರಂಭಿಕ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿ ಕಂಡಿರುವ ಈ ಸೌಲಭ್ಯವನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಮುಖ ಗುರುತಿಸುವಿಕೆ (Face Authentication) ತಂತ್ರಜ್ಞಾನದ ಮೂಲಕ ಸರಳವಾಗಿ ಬಳಸಬಹುದು.

ಹೊರ ಊರುಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಈ ಡಿಜಿಟಲ್ ವ್ಯವಸ್ಥೆ ಹೆಚ್ಚು ಅನುಕೂಲವಾಗಲಿದ್ದು, ಈಗಾಗಲೇ ಒಂದು ವರ್ಷದ ಹಿಂದೆ e-KYC ಮಾಡಿಸಿದವರೂ ನಿಯಮಾನುಸಾರ ಮತ್ತೊಮ್ಮೆ ನವೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪಡಿತರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ತಡೆಯಲು ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ಅಕ್ಟೋಬರ್ 20ರ ನಿಗದಿತ ಗಡುವಿನೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ಅಂತರ ಶಾಲಾ ಬಾಸ್ಕೆಟ್‌ಬಾಲ್ ಧಮಾಕಾ: ಡಾನ್ ಬೊಸ್ಕೊ ಮಣಿಸಿ ಟ್ರೋಫಿ ಎತ್ತಿಹಿಡಿದ ಅಂಡೇರಿಯಾ ಎಂಪಿಎಸ್!Motorola Signature 27 Snapdragon 8 Elite Extreme Gen 6 ಮತ್ತು 200MP ಟೆಲಿಫೋಟೋ ಲೆನ್ಸ್‌ನೊಂದಿಗೆ ಅನಾವರಣಬಾಲಿವುಡ್ ಅಂಗಳದಲ್ಲಿ ಹೊಸ ಲವ್ ಸ್ಟೋರಿ: ಗೆಳತಿ ಜೊತೆ ಮನೀಶ್ ಮಲ್ಹೋತ್ರಾ ಪಾರ್ಟಿಯಲ್ಲಿ ಮಾಧುರಿ ದೀಕ್ಷಿತ್ ಮಗ!ಬ್ಯಾಂಕ್ ಲಾಕರ್’ ನಲ್ಲಿ ಇಟ್ಟಿದ್ದ ₹47 ಲಕ್ಷದ ಚಿನ್ನಾಭರಣ ನಾಪತ್ತೆ! ಮಹಿಳೆಯ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ!ರಾಮಾಯಣ’ದಲ್ಲಿ ರಾಮನಾಗಿ ರಣಬೀರ್, ರಾವಣನಾಗಿ ಯಶ್; ಇಬ್ಬರಲ್ಲಿ ಶ್ರೀಮಂತ ನಟ ಯಾರು?ಕೈ ಕೈ ಹಿಡಿದು ಬಂದ ಐಶ್ವರ್ಯಾ ರೈ–ಅಭಿಷೇಕ್ ಜೋಡಿ; ರೊಮ್ಯಾಂಟಿಕ್ ಕ್ಷಣ ವೈರಲ್! ವಿಚ್ಛೇದನದ ವದಂತಿಗಳಿಗೆ ಬ್ರೇಕ್?ಆಸೀಸ್ ಕ್ರಿಕೆಟರ್ ಗೆ ಕೊಕೇನ್ ಶಾಕ್: ತಪ್ಪು ಒಪ್ಪಿಕೊಂಡು ನಿಷೇಧ ಪೂರ್ಣಗೊಳಿಸಿದ ಕ್ರಿಸ್ ಲಿನ್!ಧನ್ತೇರಸ್ 2026: ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವಾಗ? ಬೆಂಗಳೂರು ಸೇರಿ ಪ್ರಮುಖ ನಗರಗಳ ಪೂಜಾ ಸಮಯ ಇಲ್ಲಿದೆಉತ್ತರ ಪ್ರದೇಶದಲ್ಲಿ ಮೂರನೇ ಅವಧಿಗಾಗಿ ಬಿಜೆಪಿಯ ತಂತ್ರ: ಕಲ್ಯಾಣ ಯೋಜನೆ, ಮಹಿಳಾ ಮತ ಮತ್ತು ಯೋಗಿ ವರ್ಚಸ್ಸಿನ ಮೇಲೆ ಭರವಸೆಭಾರತದಲ್ಲಿ ಅತಿ ಹೆಚ್ಚು ಸಕ್ಕರೆ ಉತ್ಪಾದಿಸುವ ಟಾಪ್ 5 ಕಂಪನಿಗಳು ಯಾವುದು ಗೊತ್ತಾ? ಇಲ್ಲಿದೆ ಮಾಹಿತಿ!