LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

20 ವರ್ಷಗಳ ಬಳಿಕ ‘RBI’ ಮಹತ್ವದ ನಿರ್ಧಾರ: ನಗರ ಸಹಕಾರಿ ಬ್ಯಾಂಕ್‌ಗಳಿಗೆ ಮತ್ತೆ ಪರವಾನಗಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ನಿರ್ಧಾರ ಕೈಗೊಂಡಿದ್ದು, ನಗರ ಸಹಕಾರಿ ಬ್ಯಾಂಕ್‌ಗಳಿಗೆ (Urban Co-operative Banks – UCBs) ಹೊಸ ಪರವಾನಗಿಗಳನ್ನು (ಲೈಸೆನ್ಸ್) ನೀಡುವ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲು ತೀರ್ಮಾನಿಸಿದೆ.

ಈ ಕುರಿತು ಕರಡು ಮಾರ್ಗಸೂಚಿಗಳನ್ನು (Draft Guidelines) ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಬುಧವಾರ ಅಧಿಕೃತವಾಗಿ ಘೋಷಿಸಿದರು. ಸೋಮವಾರದಿಂದ ನಡೆದಿದ್ದ ಹಣಕಾಸು ನೀತಿ ಸಮಿತಿ (MPC) ಸಭೆಗಳು ಬುಧವಾರ ಅಂತ್ಯಗೊಂಡಿದ್ದು, ಈ ಸಭೆಯಲ್ಲಿ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಮತ್ತೆ ಪರವಾನಗಿ ನೀಡುವ ವಿಷಯದ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ. ಸುಮಾರು 20 ವರ್ಷಗಳ ಬಳಿಕ ಆರ್‌ಬಿಐ ಈ ಪ್ರಕ್ರಿಯೆಯನ್ನು ಮರುಪ್ರಾರಂಭಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.

2004ರಲ್ಲಿ ಏಕೆ ನಿಲ್ಲಿಸಲಾಗಿತ್ತು?

2004ರಲ್ಲಿ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಆರ್‌ಬಿಐ ಸ್ಥಗಿತಗೊಳಿಸಿತ್ತು. ಕಾರಣ, ಪರವಾನಗಿ ಪಡೆದ ಅನೇಕ UCBಗಳು ಅಲ್ಪಾವಧಿಯಲ್ಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದವು. ಇದನ್ನು ಗಮನಿಸಿದ ಆರ್‌ಬಿಐ, ಹೊಸ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಿತ್ತು.ನಂತರ 2025ರ ಅಕ್ಟೋಬರ್ 1ರಂದು ಪ್ರಕಟಿಸಿದ ಹಣಕಾಸು ನೀತಿ ಹೇಳಿಕೆಯಲ್ಲಿ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಹೊಸ ಪರವಾನಗಿ ನೀಡುವ ವ್ಯವಸ್ಥೆಯನ್ನು ಮರುಪರಿಶೀಲಿಸಲಾಗುವುದು ಎಂದು ಮೊದಲ ಬಾರಿಗೆ ತಿಳಿಸಿತ್ತು. ಇದೀಗ ಅದಕ್ಕೆ ಸಂಬಂಧಿಸಿದ ಕರಡು ಮಾರ್ಗಸೂಚಿಗಳನ್ನು ಹೊರಡಿಸಲು ಸಿದ್ಧತೆ ನಡೆಸಿದೆ.

ಈಗ ಮತ್ತೆ ಪರವಾನಗಿ ನೀಡಲು ಕಾರಣವೇನು?

2004ರ ನಂತರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ನಿಯಂತ್ರಣ ವ್ಯವಸ್ಥೆ, ಆಡಳಿತ ಹಾಗೂ ಮೇಲ್ವಿಚಾರಣೆಯಲ್ಲೂ ಸುಧಾರಣೆ ಕಂಡುಬಂದಿದೆ. ಈ ಹಿನ್ನೆಲೆ ಈಗ ನಗರ ಸಹಕಾರಿ ಬ್ಯಾಂಕ್‌ಗಳಿಗೆ ಮತ್ತೆ ಪರವಾನಗಿ ನೀಡಲು ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರ್‌ಬಿಐ ಅಭಿಪ್ರಾಯಪಟ್ಟಿದೆ.

ದೇಶದಲ್ಲಿ ಎಷ್ಟು UCBಗಳಿವೆ?
ನಗರ ಸಹಕಾರಿ ಬ್ಯಾಂಕ್‌ಗಳನ್ನು 1966ರಲ್ಲಿ ಆರ್‌ಬಿಐ ವ್ಯಾಪ್ತಿಗೆ ತರಲಾಯಿತು.1949ರ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ತಿದ್ದುಪಡಿ ಮೂಲಕ ಈ ವ್ಯವಸ್ಥೆ ಜಾರಿಗೆ ಬಂದಿತು.ಯಾವುದೇ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರ ನಡೆಸಲು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಸೆಕ್ಷನ್ 22 ಅಡಿಯಲ್ಲಿ ಆರ್‌ಬಿಐ ಪರವಾನಗಿ ಪಡೆಯುವುದು ಕಡ್ಡಾಯ.2025ರ ಮಾರ್ಚ್ 31ರ ವೇಳೆಗೆ ದೇಶದಲ್ಲಿ 1,457 ನಗರ ಸಹಕಾರಿ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿವೆ. 1993ರಿಂದ 2001ರ ನಡುವೆ 823 UCBಗಳಿಗೆ ಆರ್‌ಬಿಐ ಪರವಾನಗಿ ನೀಡಿತ್ತು.

ಹಿಂದೆ ಆರ್ಥಿಕ ದುರ್ಬಲತೆಯಿಂದ ಹಲವು ಸಹಕಾರಿ ಬ್ಯಾಂಕ್‌ಗಳು ಸಂಕಷ್ಟಕ್ಕೆ ಸಿಲುಕಿದ್ದ ಕಾರಣ ಪರವಾನಗಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ನಿಯಂತ್ರಣ ವ್ಯವಸ್ಥೆ ಬಲಗೊಂಡಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುವ ಸಾಧ್ಯತೆ ಕಡಿಮೆ ಎಂದು ಆರ್‌ಬಿಐ ವಿಶ್ವಾಸ ವ್ಯಕ್ತಪಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!